ಅಕ್ರಮ ಗಣಿಗಾರಿಕೆ ವಿರುದ್ಧ ಸಿಬಿಐ ತನಿಖೆಗೆ ಸುಮಲತಾ ಒತ್ತಾಯ

Share

ಮೈಸೂರು,ಜು.14: ಕೆಆರ್ ಎಸ್ ಡ್ಯಾಂ ಸುತ್ತಮುತ್ತ ತಲೆ ಎತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ದ ಸಿಬಿಐ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಅಂಬರೀಶ್ ಒತ್ತಾಯಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಕೆಆರ್‌ಎಸ್ ಬಿರುಕು ಬಿಟ್ಟಿದೆ ಅಂತ ಹೇಳಿಲ್ಲ. ಬಿರುಕು ಬಿಟ್ಟಿದೆಯಾ ಅಂತ ಸಭೆಯಲ್ಲಿ ಕೇಳಿದ್ದೇನೆ ಎಂದು ಕೆಆರ್‌ಎಸ್ ಕಲಹ ವಿಚಾರಕ್ಕೆ ಸುಮಲತಾ ಸ್ಪಷ್ಟನೆ ಕೊಟ್ಟಿದ್ದಾರೆ.

ಮುಂದುವರೆದ ಅವರು, ನನಗೆ ಈಗಲೂ ಶೇಕಡ 50ರಷ್ಟು ಆತಂಕ ಇದೆ. ಗಣಿಗಾರಿಕೆಯಿಂದ ಕೆಆರ್‌ಎಸ್ ಬಿರುಕಾಗುತ್ತೆ ಎಂಬ ಆತಂಕ ಇದೆ. ನಾನು ಇದನ್ನೇ ದಿಶಾ ಸಭೆಯಲ್ಲಿ ಕೇಳಿರೋದು. ಆದರೆ ಅದನ್ನೇ ಹೊರಗೆ ಬೇರೆ ರೀತಿಯಲ್ಲಿ ಅರ್ಥೈಸಿ ಇಷ್ಟೆಲ್ಲ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಗಣಿ ಅಧಿಕಾರಿಗಳು ಕೂಡ ಏನೂ ಆಗಿಲ್ಲ ಎನ್ನುವಂತೆ ಮಾತನಾಡುತ್ತಾರೆ. ಅವರ ಮೇಲೂ ಒತ್ತಡಗಳು ಇರಬಹುದು. ಈಗಾಗಿ ಸ್ವತಂತ್ರ ತನಿಯಾಗಬೇಕು. ರಾಜ್ಯದ ಅಧಿಕಾರಿಗಳಿಂದ
ಇದೇ ವೇಳೆ, ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ 1200ಕೋಟಿ ನಷ್ಟ ಆಗಿದೆ. ಇಷ್ಟು ರಾಜಧನ ವಸೂಲಿ ಮಾಡಿದ್ರೆ ಮಂಡ್ಯ ಅಭಿವೃದ್ಧಿಗೆ ಬಳಸಬಹುದಿತ್ತು. ಈಗ ಗಣಿ ಅಧಿಕಾರಿಗಳು ಡ್ರೋಣ್ ಸರ್ವೆಗೂ ಹಣ ಇಲ್ಲ ಎನ್ನುತ್ತಿದ್ದಾರೆ. ನಾನು ಗಣಿ ಸಚಿವ ಮುರುಗೇಶ್ ನಿರಾಣಿಗೆ ಎಲ್ಲವನ್ನು ಹೇಳಿದ್ದೇನೆ. ಮೊದಲು ಅವರನ್ನು ಭೇಟಿ ಬೆಟ್ಟ ಸುತ್ತಮುತ್ತಲಿನ ಗಣಿಗಾರಿಕೆ ಪ್ರದೇಶಕ್ಕೆ ಕರೆದುಕೊಂಡು ಬರುವೆ. ನಂತರ ವಸ್ತು ಸ್ಥಿತಿಗತಿ ಪರಿಶೀಲಿಸಿ ಮುಂದಿನ ಕ್ರಮದ ಬಗ್ಗೆ ತಿಳಿಸುವೆ ಎಂದು ಹೇಳಿದರು.

ಮುಂದುವರೆದ ಅವರು, ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ನಾನು ಎಕ್ಸ್‌ಪೋಸ್ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು. ಕೆಆರ್‌ಎಸ್ ಡ್ಯಾಂ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಬ್ಲಾಸ್ಟಿಂಗ್ ಮಾಡುವಂತಿಲ್ಲ. ಈ ಪ್ರದೇಶದಲ್ಲಿ ಅಕ್ರಮ, ಸಕ್ರಮ ಅನ್ನುವ ಪ್ರಶ್ನೆಯೇ ಬರೋದಿಲ್ಲ. ಗಣಿಗಾರಿಕೆಯಿಂದಾಗಿ ಕೆಆರ್‌ಎಸ್ ಡ್ಯಾಂನಲ್ಲಿ ಕಂಪನ ದಾಖಲಾಗಿದೆ. ಈ ಸಂಬಂಧ ಅಧಿಕೃತ ದಾಖಲೆಗಳೂ ಇವೆ. ಆದ್ದರಿಂದ ಗಣಿಗಾರಿಕೆ ನಿಲ್ಲಬೇಕು ಅಂತ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳಿದರು.

Girl in a jacket
error: Content is protected !!