ಬೆಂಗಳೂರು,ಜ,06: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೋವಿಡ್ ಹಿನ್ನೆಲೆ ಇದಕ್ಕೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು ಈ ಬೆನ್ನಲ್ಲೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.
ಗೃಹ ಸಚಿವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾವು ನಿಯಮಬದ್ಧವಾಗೇ ಪಾದಯಾತ್ರೆ ಮಾಡುತ್ತೇವೆ. ಅವರು ಬೇಕಾದ್ರೆ ಕ್ರಮಕೈಗೊಳ್ಳಲಿ. ಲೆಟ್ ದೆಮ್ ಟೇಕ್ ಆಕ್ಷನ್. ಇದಕ್ಕೆ ನಾವು ಹೆದರುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಪಾದಯಾತ್ರೆಗೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ. ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಕ್ರಮ ಖಚಿತ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು
ಅರಗಜ್ಞಾನೇಂದ್ರ ಹೇಳಿಕೆಗೆ ಸಿದ್ದು ತಿರುಗೇಟು
Share