ಬೆಂಗಳೂರು,ಜೂ,೧೮:ಫೋನ್ ಕದ್ದಾಲಿಕೆಯನ್ನು ಆಡಳಿತ ಪಕ್ಷದ ಶಾಸಕರೇ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಕೂಡಲೇ ತನಿಖೆ ನಡೆಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ ಆಡಳಿತ ಪಕ್ಷದ ಶಾಸಕರಿಂದಲೇ ಇಂತ ಆರೋಪ ಬಂದಿದೆ ಹೀಗಾಗಿ ಈ ಕುರಿತಂತೆ ಸಮಗ್ರ ತನಿಖೆ ನಡೆಸಬೇಕು,ಅಲ್ಲದೆ ,ರಮೇಶ್ ಜಾರಕಿಹೊಳಿ ಪ್ರಕರಣದಲ್ಲೂ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿತ್ತು ಹಾಗಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದೆ
ಈ ಸರ್ಕಾರ ಮಾಡಬೇಕಾದ ಕೆಲಸ ಬಿಟ್ಟು ಮಾಡಬಾರದ್ದೆಲ್ಲವನ್ನೂ ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆಫೋನ್ ಕದ್ದಾಲಿಕೆ ಸಂಬಂಧ ತನಿಖೆ ನಡೆಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವುದಾಗಿ ಬೆಲ್ಲದ್ ತಿಳಿಸಿದ್ದರು.
ಅರವಿಂದ್ ಬೆಲ್ಲದ್ ಆರೋಪದ ಬಗ್ಗೆ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ’ತಮ್ಮ ಪೋನ್ ಟ್ಯಾಪ್ ಆಗಿದೆ ಎಂದು ಬಿಜೆಪಿಯ ಭಿನ್ನಮತೀಯ ಶಾಸಕ ಅರವಿಂದ್ ಬೆಲ್ಲದ್ ಆರೋಪಿಸಿದ್ದಾರೆ. ಈ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆ ತರಬೇಕು’ ಎಂದು ಒತ್ತಾಯಿಸಿದ್ದರು.
ಫೋನ್ ಕದ್ದಾಲಿಕೆ ಆರೋಪ: ಸಮಗ್ರ ತನಿಖೆಗೆ ಕೈ ಒತ್ತಾಯ
Share