ಬಿಎಸ್‌ವೈ ಹೇಳಿಕೆ;ದೆಹಲಿಯಲ್ಲಿ ನಡೆಯುತ್ತಿವೆ ಸರಣಿ ಸಭೆ

Share

post-mallikarjuna hiremat

ಬೆಂಗಳೂರು,ಜೂ,೦೭: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೈಕಮಾಂಡ್ ಹೇಳಿದರೆ ಸಿಎಂ ಸ್ಥಾನದಿಂದ ಇಳಿಯಲು ಸಿದ್ದ ಎಂದು ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ವಿವಿಧ ಬೆಳವಣಿಗೆಗೆ ಕಾರಣವಾಗಿದೆ ಈ ಮಧ್ಯೆ ದೆಹಲಿಯಲ್ಲಿ ಮೇಲಿಂದ ಮೇಲೆ ಸಭೆಗಳು ನಡೆಯುತ್ತಿವೆ.
ರಾಜ್ಯದಲ್ಲಿ ದಿನಕ್ಕೊಬ್ಬರು ನಾಯಕತ್ವ ಬದಲಾವಣೆ ಕುರಿತಂತೆ ನೀಡುತ್ತಿರುವ ಹೇಳಿಕೆಗೆ ಮನನೊಂದು ಹೈಕಮಾಂಡ್‌ಗೆ ಮತ್ತು ತಮ್ಮ ವಿರೋಧಿ ಬಣಗಳಿಗೆ ಸಂದೇಶ ರವಾನಿಸಲು ಮುಖ್ಯಮಂತ್ರಿ ನೀಡಿದ ಈ ಹೇಳಿಕೆ ರಾಜಕೀಯ ಬೆಳವಣಿಗೆಗಳ ತೀವ್ರಗತಿಯಲ್ಲಿ ಸಾಗುತ್ತಿವೆ.
ಈ ಮಧ್ಯೆ ಸಿಎಂ ವಿರೋಧಿ ಬಣಗಳು ಒಗ್ಗೂಡಿ ಗುಟ್ಟಾಗ ಸಭೆಗಳನ್ನು ನಡೆಸುತ್ತಿದ್ದಾರೆ ಇದು ಈಗ ಬಿಜೆಪಿ ಪಕ್ಷದಲ್ಲಿ ನಾಯಕತ್ವದ ತಲ್ಲಣ ಮೂಡಿಸುತ್ತದೆ ಜೊತೆಗೆ ಆತಂಕವೂ ಮೂಡಿಸಿದೆ.
ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನವದೆಹಲಿಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದರು, ಅದಾದ ನಂತರ ಸಿಎಂ ಹುದ್ದೆ ಆಕಾಂಕ್ಷಿ ಮುರುಗೇಶ್ ನಿರಾಣಿ ಕೂಡ ದೆಹಲಿಗೆ ತೆರಳಿದ್ದರು.


ಇನ್ನೂ ದೆಹಲಿಯಿಂದ ವಾಪಾಸಾದ ಸಚಿವ ಸಿಪಿ ಯೋಗೇಶ್ವರ್ ರಾಜ್ಯ ನಾಯಕರುಗಳಾದ ಶ್ರೀನಿವಾಸ್ ಪ್ರಸಾದ್, ಮತ್ತು ಮೈಸೂರು ಎಂಎಲ್ ಸಿ ಅಡಗೂರು ವಿಶ್ವನಾಥ್ ಅವರನ್ನು ಭೇಟಿ ಮಾಡಿದ್ದಾರೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ದೆಹಲಿಗೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ಹೋಗಿರಲಿಲ್ಲ, ಬದಲಿಗೆ ಇಡಿ ನಡೆಸುತ್ತಿರುವ ವಿಚಾರಣೆಗಾಗಿ ತೆರಳಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದ್ದರು.
ಹೈಕಮಾಂಡ್ ಸೂಚಿಸಿದ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಪಕ್ಷದೊಳಗಿನ ತಮ್ಮ ವಿರೋಧಿಗಳ ಬಾಯಿ ಮುಚ್ಚಿಸಲು ಯಡಿಯೂರಪ್ಪ ಈ ತಂತ್ರ ಹೂಡಿದ್ದಾರೆ ಎನ್ನಲಾಗಿದೆ.
ಮಾಜಿ ಸಚಿವ ಸಿ.ಟಿ ರವಿ ಮೂರು ದಿನಗಳ ಕಾಲ ದೆಹಲಿಯಲ್ಲಿ ಬೀಡು ಬಿಟ್ಟಿದ್ದರು. ಕೇಂದ್ರ ನಾಯಕರ ಜೊತೆ ಸಭೆಯಲ್ಲಿ ಭಾಗವಹಿಸಿದ್ದರು. ಮತ್ತೊಬ್ಬ ಪ್ರಮುಖ ಲಿಂಗಾಯತ ನಾಯಕ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದು ಶನಿವಾರ ವಾಪಾಸಾಗಿದ್ದಾರೆ.


ಅ ನಾಯಕರುಗಳ ರಹಸ್ಯ ಸಭೆಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಆದರೆ ದೆಹಲಿಯಲ್ಲಿ ನಡೆಯುತ್ತಿರುವ ಚರ್ಚೆ ನಾಯಕತ್ವ ಬದಲಾವಣೆಗೆ ಸಂಬಂಧಿಸಿದ್ದಾಗಿದೆ ಎಂದು ಸ್ಪಷ್ಟವಾಗಿದೆ.

ಇನ್ನೂ ಕೇಂದ್ರ ಬಿಜೆಪಿ ನಾಯಕರುಗಳ ಜೊತೆ ಮುರುಗೇಶ್ ನಿರಾಣಿ ಅವರ ಸಂಪರ್ಕವಿರುವುದು, ವಿಶೇಷವಾಗಿ ಗೃಹಸಚಿವ ಅಮಿತ್ ಶಾ ಅವರೊಂದಿಗಿನ ಸಂಬಂಧ ಗುಟ್ಟಾಗಿ ಉಳಿದಿಲ್ಲ.
ಇದರ ಜೊತೆಗೆ ಶುಕ್ರವಾರ ಮತ್ತು ಶನಿವಾರ ನಿರಾಣಿ ಆರ್ ಎಸ್ ಎಸ್ ಮತ್ತು ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ. ಇನ್ನೂ ೧೦ ದಿನಗಳ ಹಿಂದೆ ಸಿಪಿ ಯೋಗೇಶ್ವರ ಮತ್ತು ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ತೆರಳಿದ್ದರಿಂದ ನಿರಾಣಿ ತಮ್ಮ ಯೋಜನೆ ಬದಲಾಯಿಸಿದ್ದರು.


ಇದೆಲ್ಲದರ ನಡುವೆ ದೆಹಲಿಯ ನಾಯಕರು ಇದನ್ನು ಗಂಭೀರವಾಗಿ ಪರಿಗಣಿಸಿದ್ದು ರಾಜ್ಯ ನಾಯಕರಿಗೆ ಸದ್ಯ ಯಾವುದೇ ಹೇಳಿಕೆಗಳನ್ನು ಕೊಡಬೇಡಿ ಎನ್ನುವ ಸಂದೇಶಗಳನ್ನು ರವಾನಿಸಿದ್ದಾರೆ.ಅಲ್ಲದೆ ರಾಜ್ಯ ರಾಜಕಾರಣದ ಬೆಳವಣಿಗೆಯನ್ನು ಕಾದು ನೋಡಿ ಒಂದು ತೀರ್ಮಾನಕ್ಕೆ ಬರುವ ನಿರ್ಧಾರವನ್ನು ತಗೆದುಕೊಂಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

Girl in a jacket
error: Content is protected !!