ಬೆಂಗಳೂರು,ಆ21-: ಬಿಜೆಪಿ ಬ್ಯಾಟರಾಯನಪುರ ಕ್ಷೇತ್ರದ ವತಿಯಿಂದ ರಾಜ್ಯ ಬಿಜೆಪಿ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ ಅವರ ನೇತೃತ್ವದಲ್ಲಿ ಕೊಡಿಗೇಹಳ್ಳಿಯ ಶ್ರೀ ಗುಂಡಾಂಜನೇಯ ಸ್ವಾಮಿ ದೇವಾಲಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ತನಕ ನಡೆಯುವ ‘ಧರ್ಮಯಾತ್ರೆ’ ಅಭಿಯಾನಕ್ಕೆ ಇಂದು ಬೆಳಿಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಚಾಲನೆ ನೀಡಿದರು. ವಿಶೇಷ ಪೂಜೆ ನೆರವೇರಿಸಿದ ನಂತರ ನೂರಾರು ವಾಹನಗಳೊಂದಿಗೆ ಅಭಿಯಾನವನ್ನು ಆರಂಭಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಈ ಯಾತ್ರೆ ನಡೆಯುತ್ತಿದೆ. ಇಂದು ಸಂಜೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ರಾಜ್ಯ ಬಿಜೆಪಿ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ಬಿಜೆಪಿ ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಪ್ರಮುಖರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು.