ಮನೆ ಹಂಚಿಕೆಯಲ್ಲಿ ಲಂಚ, ಬಿ,ಆರ್.ಪಾಟೀಲ್‌ಹೇಳಿಕೆ ಖಂಡಿಸಿದ ಡಿಕೆಶಿ

Share

ಬೆಂಗಳೂರು,ಜೂ,೨೧-ವಸತಿಇಲಾಖೆಯಲ್ಲಿ ಮನೆ ಹಂಚಿಕೆ ಮಾಡಲು ಲಂಚ ನೀಡಿದವರಿಗೆ ಮಾತ್ರ ನೀಡಲಾಗುತ್ತದೆ ಎಂಬ ಶಾಸಕ ಬಿ.ಆರ್.ಪಾಟೀಲ್ ಅವರ ಹೇಳಿಕೆಯನ್ನುಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ.

ರಾಜ್ಯ ನೀತಿಆಯೋಗದ ಉಪಧ್ಯಕ್ಚರಾದ ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಜಮೀರ್ ಅಹಮದ್ ಕಾರ್ಯದರ್ಶಿ ಸರ್ಪರಾಜ್‌ಖಾನ್ ಅವರೊಡನೆ ನಡೆಸಿದ ಸಂಭಾಷಣೆ ಆಡಿಯೋ ಕ್ಲಿಪನಲ್ಲಿ ತಮ್ಮ ಕ್ಷೇತ್ರದ ಹಳ್ಳಿಗಳಲ್ಲಿ ಮನೆ ಹಂಚಿಕೆನಡೆದಿದೆಎನ್ನಲಾಗಿದೆ ಲಂಚದ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ್ದ ಕಾರ್ಯದರ್ಶಿಯನ್ನುಪ್ರಶ್ನಿಸಿದ್ದಾರೆಮನೆ ಹಂಚಿಕೆಯ ಲಂಚದ ಆರೋಪ ಮಾಡಿ ತಮ್ಮದೆಪಕ್ಷದ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ್ದರು.

ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಆಡಿಯೋ ಕ್ಲಿಪ್ ವೈರಲ್ ಆಗಿದ್ದು, ಯಾವುದೇ ಕಾರಣಕ್ಕೂ ಅದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಬಿ.ಆರ್. ಪಾಟೀಲ್ ಏನು ಹೇಳಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಈ ವಿಚಾರ ಮುಖ್ಯಮಂತ್ರಿಗಳ ಗಮನಕ್ಕೆ ಬಂದಿದೆ. ಅವರು ಅಗತ್ಯ ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.

ಪಾರದರ್ಶಕವಾಗಿ ಮನೆ ಮಂಜೂರಾತಿ ಆಗುತ್ತಿರುವಾಗ ಫಲಾನುಭವಿಗಳು ಹೇಗೆ ಹಣ ಪಾವತಿಸುತ್ತಾರೆ. ಯಾರು ತೀರ್ಮಾನ ಮಾಡುತ್ತಾರೆ? ಪಂಚಾಯಿತಿ, ಸ್ಥಳೀಯ ಸಂಸ್ಥೆಗಳೇ ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್, ಈ ಹಣದ ವಿಚಾರ ಸರ್ಕಾರದಲ್ಲಿರುವ ಸಚಿವರಿಗೆ ಹೇಗೆ ಬರುತ್ತದೆ? ಯಾವ ಉದ್ದೇಶದಿಂದ ಅವರು ಹೀಗೆ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ? ಇದು ಸರಿಯಲ್ಲ. ನಾನು ಖಂಡಿಸುತ್ತೇನೆ ಎಂದು ಹೇಳಿದರು.
ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಾಟೀಲ್, ಆಡಿಯೋದಲ್ಲಿರುವುದು ನನ್ನ ಧ್ವನಿ. ಸತ್ಯವನ್ನೇ ಮಾತನಾಡಿದ್ದೇನೆ. ನಾನೇ ಮಾತನಾಡಿದ್ದೇನೆ. ನಾನು ಏನು ಮಾಡಬೇಕೋ ಅದನ್ನು ಹೇಳಿದ್ದೇನೆ, ಮುಖ್ಯಮಂತ್ರಿ ಏನು ಮಾಡುತ್ತಾರೋ ನನಗೆ ಗೊತ್ತಿಲ್ಲ. ಅವರು ನನಗೆ ಕರೆ ಮಾಡಿದರೆ ಅವರ ಬಳಿಗೆ ಹೋಗಿ ಮಾತನಾಡುತ್ತೇನೆ” ಎಂದು ಅವರು ಹೇಳಿದರು. ನೆಗೆಟಿವ್ ಏನು? ನಾನು ಸತ್ಯವನ್ನೇ ಮಾತನಾಡಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಹಣ ಕೊಟ್ಟ ಮೇಲೆ ಮನೆ ಮಂಜೂರಾತಿ ನೀಡಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಎಲ್ಲ ಸಂದರ್ಭದಲ್ಲೂ ಅಲ್ಲ, ಐದಾರು ಪಂಚಾಯಿತಿಗಳಲ್ಲಿ ಹಣ ನೀಡಿ ಹಂಚಿಕೆ ಮಾಡಲಾಗಿದೆ, ನನ್ನ ಕ್ಷೇತ್ರದಲ್ಲಿ ಮನೆ ಮಂಜೂರು ಮಾಡುವಂತೆ ನಾಲ್ಕು ಬಾರಿ ಪತ್ರ ನೀಡಿದ್ದೆ, ಏನೂ ಆಗಿಲ್ಲ, ಪಂಚಾಯಿತಿ ಅಧ್ಯಕ್ಷರು ಅದನ್ನು ಮಾಡಿದ್ದಾರೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ನಮ್ಮ ನಾಯಕ ಎಂದ ಪಾಟೀಲ್, ಸಿಎಂ ಕರೆದರೆ ಅವರ ಬಳಿ ಹೋಗಿ ಮಾತನಾಡುತ್ತೇನೆ. ಏನಾಯಿತು ಎಂದು ಅವರಿಗೆ ಹೇಳುತ್ತೇನೆ ಎಂದರು.

ಬಿ.ಆರ್. ಪಾಟೀಲ್ ಅವರ ಹೇಳಿಕೆ ಪ್ರತಿಪಕ್ಷ ಬಿಜೆಪಿಗೆ ದೊಡ್ಡ ಅಸ್ತ್ರ ಒದಗಿಸಿದ್ದು, ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮುಗಿ ಬಿದಿದ್ದಾರೆ.

Girl in a jacket
error: Content is protected !!