ಮುಡಾ ಪ್ರಕರಣ- ಸಿದ್ದರಾಮಯ್ಯ ಗೆ ಕ್ಲೀನ್ ಚಿಟ್ ?
by ಕೆಂಧೂಳಿ
ಬೆಂಗಳೂರು, ಜ,23- ಮುಡಾ ಹಗರಣ ಕುರಿತಂ ತನಿಖೆ ನಡೆಸಿದ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎನ್ನಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ವರದಿಯನ್ನ ಸಲ್ಲಿಕೆ ಮಾಡಲಿದ್ದಾರೆ ಮಾಹಿತಿ ಲಭ್ಯವಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.
ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿನೋಟಿಫೈ ಭೂ ಪರಿವರ್ತನೆ ಮಾಡಬೇಕಾದ್ರೆ ನಿಯಮ ಉಲ್ಲಂಘನೆಯಾಗಿದೆ. ಮುಡಾ ಆಯುಕ್ತರು, ಕಂದಾಯ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ಮೂಲಗಳು ತಿಳಿಸಿವೆ.