ಬೆಂಗಳೂರು ,ಆ,23: ರಾಜ್ಯದಲ್ಲಿ ಇಂದಿನಿಂದ 9,10 ಮತ್ತು ಪಿಯುಸಿ ಭೌತಿಕ ತರಗತಿಗಳು ಆರಂಭವಾಗಿದ್ದು, 1-8 ನೇ ತರಗತಿ ಆರಂಭಿಸುವ ಬಗ್ಗೆಯೂ ತಜ್ಞರ ಸಲಹೆ ಕೇಳಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದಿನಿಂದ 9-12 ನೇ ತರಗತಿಗಳು ಆರಂಭದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೊವಿಡ್ ಕಡಿಮೆಯಾದರೆ ಗಡಿ ಜಿಲ್ಲೆಗಳಲ್ಲೂ ಶಾಲೆ ಆರಂಭಿಸಲಾಗುವುದು.
1-8 ನೇ ತರಗತಿ ಆರಂಭಿಸುವ ಬಗ್ಗೆಯೂ ತಜ್ಞರ ಸಲೆಹ ಕೇಳಿದ್ದೇವೆ. ಅವರ ಸಲಹೆ ಆಧರಿಸಿ ಶಾಲೆ ಆರಂಭಿಸುವ ಬಗ್ಗ ಶೀಘ್ರವೇ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.
ನಮಗೆ ಮಕ್ಕಳ ಆರೋಗ್ಯ ಮುಖ್ಯ, ಎಲ್ಲರೂ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಂದು ತರಗತಿಗಳುಉ ಆರಂಭವಾಗಿರುವುದರಿಂದ ಮಕ್ಕಳಿಗೆ ಕೋವಿಡ್ ನಿಂದ ಸ್ವಾತಂತ್ರ್ಯ ಸಿಕ್ಕಷ್ಟು ಸಂತಸವಾಗಿದೆ ಎಂದರು.
 
                                         
					
										
												
				
 
									 
									