ಡೆಲ್ಟಾ ಪ್ಲೆಸ್ ಕೊರೊನಾ ರೂಪಾಂತರ ತಳಿ ಹೆಚ್ಚಿಸಿದ ಆತಂಕ

Share

ಕೊರೊನಾ ಮೂರನೆ ಅಲೆಯ ಆತಂಕದಲ್ಲಿರುವ ಸಂದರ್ಭದಲ್ಲಿ ಡೆಲ್ಟಾ ಪ್ಲೆಸ್ ಕೊರೊನಾ ರೂಪಾಂತರ ತಳಿ ಕಾಣಿಸಿಕೊಂಡು ಆತಂಕ ಹುಟ್ಟಿಸಿದೆ.

ಬೆಂಗಳೂರು ಜೂ,24: ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ತಳಿಯ ವೈರಸ್ ಇದೀಗ ಬೆಂಗಳೂರಿನಲ್ಲಿಯೂ ಕಾಣಿಸಿಕೊಂಡಿದೆ.

ಡೆಲ್ಟಾ ಪ್ಲಸ್ ವೈರಸ್ ಮೊದಲ ಪ್ರಕರಣ ಮೈಸೂರಿನಲ್ಲಿ ಪತ್ತೆಯಾಗಿತ್ತು. ಇದೀಗ ಬೆಂಗಳೂರಿನಲ್ಲಿಯೂ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ದೃಢಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುಧಾಕರ್ ಅವರು, ಮಂಗಳವಾರ ಮೈಸೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು. ಬುಧವಾರ ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ ಕಂಡುಬಂದಿದೆ. ಬೆಂಗಳೂರಿನಲ್ಲಿ ರೋಗಿಯನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರೊಂದಿಗೆ ಕರ್ನಾಟಕದಲ್ಲಿ ಒಟ್ಟು ಎರಡು ಪ್ರಕರಣಗಳು ಪತ್ತೆಯಾದಂತಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ತಮಿಳುನಾಡಿನಿಂದ ಇಲ್ಲಿನ ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರಕ್ಕೆ ಕಳುಹಿಸಿದ ಒಂದು ಮಾದರಿಯಲ್ಲಿಯೂ ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಕೊರೋನಾ ಸೋಂಕಿಗೊಳಗಾಗಿದ್ದ 86 ವರ್ಷದ ವ್ಯಕ್ತಿಯಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ವ್ಯಕ್ತಿಯ ಮಾಹತಿಯನ್ನು ನಿಮ್ಹಾನ್ಸ್’ಗೆ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಳಿಕ ವ್ಯಕ್ತಿಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

Girl in a jacket
error: Content is protected !!