ಸರ್ಕಾರ ಆಯಾ ಪ್ರದೇಶದಲ್ಲಿ ಸುರಕ್ಷತೆ ಬಗ್ಗೆ ಅರಿತು ಸ್ಥಳೀಯವಾಗಿ ನಿರ್ಧಾರ ಮಾಡಬೆಕು ಎಂದಿರುವ ಅರು ಕೊರೊನಾ ಇಳಿಮುಖವಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಏಕಾ ಏಕಿ ನಿರ್ಧಾರಕ್ಕೆ ಬರುವುದು ಸೂಕ್ತವಲ್ಲ ಎಂದು ವರದಿಯಲ್ಲಿ ತಿಳಿಸಿದೆ
ಬೆಂಗಳೂರು,ಜೂ.೨೨:ಮಕ್ಕಳಿಗೆ ಶಾಲೆ ಪುನರಾರಂಭ ಮಾಡುವುದರಿಂದ ಉಪಯೋಗ ಮತ್ತು ಸಮಸ್ಯೆ ಎರಡೂ ಇವೆ ಎರಡನ್ನು ಕೂಲಂಕುಷವಾಗಿ ಪರಿಶೀಲಿಸಿ ಶಾಲೆ ಆರಂಭ ಮಾಡಬೇಕೆ ಬೇಡವೇ ಎನ್ನುವ ಕುರಿತು ನಿರ್ಧಾರ ಮಾಡಬಹುದು.
ಇದು ಡಾ.ದೇವಿಶೆಟ್ಟಿ ನೇತೃತ್ವದ ಮೂರನೇ ಅಲೆ ಸಿದ್ದತೆ ಕುರಿತು ರಚಿಸಿರುವ ಉನ್ನತ ಮಟ್ಟದ ತಜ್ಞರ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರವ ವರದಿಯ ಅಂಶ.
ಸರ್ಕಾರ ಆಯಾ ಪ್ರದೇಶದಲ್ಲಿ ಸುರಕ್ಷತೆ ಬಗ್ಗೆ ಅರಿತು ಸ್ಥಳೀಯವಾಗಿ ನಿರ್ಧಾರ ಮಾಡಬೆಕು ಎಂದಿರುವ ಅರು ಕೊರೊನಾ ಇಳಿಮುಖವಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಏಕಾ ಏಕಿ ನಿರ್ಧಾರಕ್ಕೆ ಬರುವುದು ಸೂಕ್ತವಲ್ಲ ಎಂದು ವರದಿಯಲ್ಲಿ ತಿಳಿಸಿದ್ದಾರೆ
ಮಕ್ಕಳಿಗೆ ಶಾಲೆ ಪುನರಾರಂಭ ಮಾಡುವುದರಿಂದ ಉಪಯೋಗ ಹಾಗೂ ಸಮಸ್ಯೆ ಎರಡೂ ಇವೆ. ಎರಡನ್ನೂ ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರ ಅಗತ್ಯ ನಿರ್ಧಾರ ತೆಗೆದುಕೊಳ್ಳಬೇಕು. ತೀರಾ ಸುರಕ್ಷಿತ ಎಂದು ನಿರ್ಧಾರವಾದ ಸ್ಥಳಗಳಲ್ಲಿ ಕೇಂದ್ರ-ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಶಾಲೆ ಪುನರಾರಂಭಕ್ಕೆ ಸ್ಥಳೀಯ ಆಡಳಿತಗಳಿಗೆ ಅನುಮತಿ ನೀಡಬೇಕು ಎಂದು ಸಲಹೆ ನೀಡಿರುವ ಬಗ್ಗೆ ಸಮತಿ ಸದಸ್ಯರೊಬ್ಬರು ತಿಳಿಸಿದ್ದಾರೆ
ಇದು ಕೇವಲ ಸಾಧ್ಯಾಸಾಧ್ಯತೆಗಳ ಬಗೆಗಿನ ಸಲಹೆ ಮಾತ್ರ. ಈ ಬಗ್ಗೆ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಸಭೆಯಲ್ಲಿ ಚರ್ಚಿಸಿ ಬಳಿಕ ಅಂತಿಮ ನಿರ್ಧಾರ ಪ್ರಕಟಣೆಯಾಗುವ ಸಾಧ್ಯತೆ ಇದೆ.
ಆದರೆ, ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸುವ ಮೊದಲು ಪ್ರತಿಯೊಬ್ಬ ಶಿಕ್ಷಕರಿಗೂ ಲಸಿಕೆ ನೀಡಿರಬೇಕು. ಜತೆಗೆ ಮಕ್ಕಳ ಪೋಷಕರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ಜತೆಗೆ ಶಾಲಾ ಸಿಬ್ಬಂದಿ, ಶಾಲಾ ವಾಹನ ಸಿಬ್ಬಂದಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂಪರ್ಕಕ್ಕೆ ಬರುವ ಭಾಗಶಃ ಜನರಿಗೆ ಲಸಿಕೆ ನೀಡಬೇಕು ಎಂದು ವರದಿಯಲ್ಲಿ ತಿಳಿಸಿದ್ದೇವೆ ಎಂದು ಹೇಳಿದರು.
ಸ್ಥಳೀಯವಾಗಿ ಸೋಂಕು ತೀರಾ ಕಡಿಮೆ ಇರುವ ಸುರಕ್ಷಿತ ಪ್ರದೇಶದಲ್ಲಿ ಶಾಲೆ ಪುನರಾರಂಭಕ್ಕೆ ನಿರ್ಧರಿಸಲು ಸ್ಥಳೀಯ ಆಡಳಿತಕ್ಕೆ ಅನುಮತಿ ನೀಡಬೇಕು. ಈ ವೇಳೆ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಮಾರ್ಗಸೂಚಿಯ ಅಡಿಯಲ್ಲೇ ನಿರ್ಧಾರ ತೆಗೆದುಕೊಳ್ಳಬೇಕು.
ಕೇಂದ್ರ ಸರ್ಕಾರವು ಅಕ್ಟೋಬರ್ವರೆಗೆ ಶಾಲೆಗಳನ್ನು ತೆರೆಯಬಾರದು ಎಂದು ಅಭಿಪ್ರಾಯಪಟ್ಟಿದ್ದು, ಇದೇ ವೇಳೆ ಶಾಲೆ ತೆರೆಯುವ ಸಮಯ ಹಾಗೂ ರೀತಿಯನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿರುವುದಾಗಿ ತಿಳಿಸಿದೆ. ಇದೇ ವೇಳೆ ಗರಿಷ್ಠ ಸಂಖ್ಯೆಯಲ್ಲಿ ಶಿಕ್ಷಕರಿಗೆ ಲಸಿಕೆ ನೀಡಬೇಕು. ಶಾಲೆಗಳಲ್ಲಿ ಮಕ್ಕಳ ನಡುವೆ ಅಂತರ ಕಾಯ್ದುಕೊಳ್ಳಬೇಕು. ೨-೩ ಗಂಟೆ ಮಾತ್ರ ಶಾಲೆಗಳನ್ನು ತೆರೆದಿರಬೇಕು. ಪಠ್ಯ ಪುಸ್ತಕ, ಸ್ಟೇಷನರಿ ವಿನಿಮಯ ಮಾಡಿಕೊಳ್ಳಬಾರದು ಎಂಬುದು ಸೇರಿ ಕೆಲವು ಸಲಹೆ ನೀಡಿದೆ. ಇವೆಲ್ಲವನ್ನೂ ಪರಿಗಣಿಸಿ ಪ್ರತ್ಯೇಕ ಮಾರ್ಗಸೂಚಿ ಮಾಡಬೇಕು ಎಂದು ಸಲಹೆ ನೀಡಿದೆ.