ಆಪರೇಷನ್ ಸಿಂಧೂರ್’ ನಮ್ಮ ಸೇನೆ ನಮ್ಮ ಹೆಮ್ಮ- ಜಮೀರ್ ಅಹಮದ್ ಖಾನ್

Share

ಬೆಂಗಳೂರು,ಮೇ,7- ಪೆಹಲ್ಗಮ್ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್ ‘ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನ ಕ್ಕೆ ತಕ್ಕ ಪಾಠ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ ಪಾಕಿಸ್ತಾನ ಕ್ಕೆ ಉಳಿಗಾಲ ಇಲ್ಲ ಎಂಬ ಸಂದೇಶ ರವಾನೆ ಯಾಗಿದೆ. ‘ನಮ್ಮ ಸೇನೆ ನಮ್ಮ ಹೆಮ್ಮೆ’ ಎಂದು ಹೇಳಿದ್ದಾರೆ.
ಭಾರತದಲ್ಲಿ ಅಶಾಂತಿ ಸೃಷ್ಟಿಸುವ ಹಾಗೂ ಭಯೋತ್ಪಾದಕ ಕೃತ್ಯ ಎಸಗುವ ಉಗ್ರಗಾಮಿ ಸಂಘಟನೆಗಳ ಹುಟ್ಟಡಗಿಸುವ ಹೋರಾಟದಲ್ಲಿ ನಾವೆಲ್ಲರೂ ಕೇಂದ್ರ ಸರ್ಕಾರದ ಜತೆ ಇದ್ದೇವೆ ಎಂದು ತಿಳಿಸಿದ್ದಾರೆ.

Girl in a jacket
error: Content is protected !!