ಬೆಂಗಳೂರು, ಜೂನ್,05-ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ.
ಸಚಿವ ಸಂಪುಟದ ನಂತರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ಎಂದರು.ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.
ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ವಿವರಿಸಿದರು.