ಇಂದಿನಿಂದ6ರಿಂದ8ನೇತರಗತಿ ಶಾಲೆಗಳು ಆರಂಭ

Share

ಬೆಂಗಳೂರು,ಸೆ,06:  ಇಂದಿನಿಂದ 6ರಿಂದ8ನೇತರಗತಿ ವರೆಗೆ ಶಾಲೆಗಳು ಆರಂಭವಾಗಲಿವೆ.

ಕೋವಿಡ್‌ ಮುನ್ನೆಚ್ಚರಿಕೆ ಕ್ರಮ ವಹಿಸಿಕೊಂಡು, ಎಸ್‌ಒಪಿ  ಪಾಲಿಸಿ ತರಗತಿಗಳನ್ನು ಆರಂಭಿಸುವಂತೆ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಪ್ರತಿಕ್ರಿಯಿಸಿ, ‘ಶಾಲೆ ಆರಂಭಿಸುವ ಬಗ್ಗೆ ಪೋಷಕರ ಸಭೆ ನಡೆಸಿದ್ದೇವೆ. ಆದರೆ, ಹೆಚ್ಚಿನ ಪೋಷಕರು ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಮುಂದುವರಿಸುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ’ ಎಂದರು.

ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾಗುತ್ತಿರುವ ಕಾರಣ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಬೆಂಗಳೂರಿನ ಜೆ.ಬಿ. ನಗರದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ (ಕೆಪಿಎಸ್) ಇಂದು ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

Girl in a jacket
error: Content is protected !!