ಐಪಿಎಸ್ ರೂಪಾ ಮುದ್ಗಲ್,ಐಎಎಸ್ ರೋಹಿಣಿ ಸಿಂಧೂರಿಗೆ ಪುಸ್ತಕ ಓದಲು ನ್ಯಾಯಲಯ ಸಲಹೆ

Share

ಐಪಿಎಸ್ ರೂಪಾ ಮುದ್ಗಲ್,ಐಎಎಸ್ ರೋಹಿಣಿ ಸಿಂಧೂರಿಗೆ ಪುಸ್ತಕ ಓದಲು ನ್ಯಾಯಲಯ ಸಲಹೆ

by-ಕೆಂಧೂಳಿ

ಬೆಂಗಳೂರು,ಫೆ,06-ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ ನ್ಯಾಯಲಯದಲ್ಲಿ ನಡೆದ ವಿವಾರಣೆ ವೇಳೆ ಇಬ್ಬರಿಗೂ ‘ಒನ್ ಮಿನಿಟ್ ಅಪಾಲಾಜಿ’ ಪುಸ್ತಕ ಓದುವಂತೆ ಸಲಹೆ ನೀಡಲಾಯಿತು.

ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ನಲ್ಲಿ ಬುಧವಾರ ಸಾಕ್ಷ್ಯ ವಿಚಾರಣೆ ನಡೆಯಿತು. ಈ ವೇಳೆ ಇಬ್ಬರಿಗೂ ಕೋರ್ಟ್ ಕಲಾಪದಲ್ಲಿ ಸಮಯ ವ್ಯಯಿಸುವ ಬದಲು ರಾಜಿ ಸಾಧ್ಯವೇ ಯೋಚಿಸಿ ಎಂದು ನ್ಯಾಯಾಧೀಶ ವಿಜಯ್ ಕುಮಾರ್ ಜಾಟ್ಲಾ ಅವರು ಕಿವಿ ಮಾತು ಹೇಳಿದರು. ಅಲ್ಲದೇ ಇಬ್ಬರು ಅಧಿಕಾರಿಗಳಿಗೆ One Minute Apology ಪುಸ್ತಕ ಓದುವಂತೆ ಸಲಹೆ ನೀಡಿದರು.

Adavategement

ವಿಚಾರಣೆ ವೇಳೆ ಹಾಜರಾಗಿದ್ದ ರೋಹಿಣಿ ಸಿಂಧೂರಿ ಹಾಗೂ ರೂಪಾ‌ ಮೌದ್ಗಿಲ್ ನಡುವೆ ರಾಜಿ ಮಾಡಲು ನ್ಯಾಯಾಲಯ ಮುಂದಾಗಿದೆ. ಇಬ್ಬರೂ ಉತ್ತಮ ಹೆಸರು ಗಳಿಸಿದ ಹಿರಿಯ ಅಧಿಕಾರಿಗಳಾಗಿದ್ದೀರಿ. ನಿಮ್ಮ ಸಮಯ ಸಮಾಜಕ್ಕಾಗಿ ಮೀಸಲಿಡಬೇಕು. ಕೋರ್ಟ್ ಕಲಾಪದಲ್ಲಿ ಸಮಯ ವ್ಯಯಿಸುವ ಬದಲು ರಾಜಿ ಸಾಧ್ಯವೇ ಯೋಚಿಸಿ ಎಂದು ನ್ಯಾಯಾಧೀಶ ವಿಜಯ್ ಕುಮಾರ್ ಜಾಟ್ಲಾ ಅವರಿದ್ದ ಪೀಠ ಕಿವಿ ಮಾತು ಹೇಳಿ ಫೆಬ್ರವರಿ 12ಕ್ಕೆ ವಿಚಾರಣೆ ಮುಂದೂಡಿದೆ.

ಕರ್ನಾಟಕದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಗಂಭೀರ ಆರೋಪ ಮಾಡಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ನಡುವಿನ ಜಗಳ ಲೋಕಲ್ ಕೋರ್ಟ್, ಹೈಕೋರ್ಟ್ ಮುಗಿದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಸುಪ್ರೀಂಕೋರ್ಟ್​ನಲ್ಲೂ ಸಹ ಈ ಇಬ್ಬರು ಅಧಿಕಾರಿಗಳ ಜಗಳ ಬಗೆಹರಿದಿಲ್ಲ. ನ್ಯಾಯಾಧೀಶರ ಮನವಿಗೂ ಬಗ್ಗದ ಅಧಿಕಾರಿಗಳು, ನಾನಾಗಿಯೇ ಸೋಲುವುದಿಲ್ಲ ಎಂದು ವಿಚಾರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ ಎನ್ನಲಾಗಿದ್ದು, ಕೊನೆಗೆ ಸುಪ್ರೀಂಕೋರ್ಟ್, ವಿಚಾರಣಾಧೀನಾ ನ್ಯಾಯಾಲಯದಲ್ಲಿಯೇ ಬಗೆಹರಿಸಿಕೊಳ್ಳಿ ಎಂದು ಹೇಳಿದ್ದನ್ನು ಈ ವೇಳೆ ಸ್ಮರಿಸಬಹುದು.

Girl in a jacket
error: Content is protected !!