ಒಂದು‌ ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ: ಲಕ್ಷ್ಮೀ ಹೆಬ್ಬಾಳಕರ್

Share

ಒಂದು‌ ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ: ಲಕ್ಷ್ಮೀ ಹೆಬ್ಬಾಳಕರ್

by-ಕೆಂಧೂಳಿ
ಬೆಂಗಳೂರು, ಫೆ,21- ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌

ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ‌ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ವಿರೋಧ ಪಕ್ಷದವರಿಗೆ ಮಾತನಾಡುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ.‌ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ನಮ್ಮ ಯೋಜನೆಗಳನ್ನೇ ಕಾಪಿ ಮಾಡಿಕೊಂಡು ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದರು ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Girl in a jacket
error: Content is protected !!