ಕೊರೊನಾ ದಿಂದ ಸಾವನ್ನಪ್ಪಿದ ಕುಟುಂಬಕ್ಕೆ ೧ ಲಕ್ಷ ರೂ ಪರಿಹಾರ

Share

ಬೆಂಗಳೂರು, ಜೂ, ೧೪; ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬದ ದುಡಿಯುವ ಒಬ್ಬ ವ್ಯಕ್ತಿಗೆ ಒಂದು ಲಕ್ಷರೂಗಳನ್ನು ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಈ ಮೂಲಕ ಕೊರೊನಾದಿಂದ ಸತ್ತವರ ಕುಟುಂಬಗಳಿಗೆ ೧ಲಕ್ಷ ರೂ ನೀಡುವ ಘೋಷಣೆ ಮಾಡಿದ ಮೊದಲ ಸರ್ಕಾರ ಎಂಬ ಹೆಗ್ಗಳಿಕೆಗೆ ರಾಜ್ಯ ಸರ್ಕಾರ ಪಾತ್ರವಾಗಿದೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ ಅವರು,
“ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಕೋವಿಡ್‌ನಿಂದ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರವನ್ನು ನೀಡಲಾಗುತ್ತದೆ. ಇದರಿಂದ ಒಟ್ಟು ೨೦ ರಿಂದ ೩೦ ಸಾವಿರ ಕುಟುಂಬಕ್ಕೆ ನೆರವು ಸಿಗಲಿದೆ” ಎಂದು ಹೇಳಿದರು.
ಕೋವಿಡ್ ಸೋಂಕಿಗೆ ಕುಟುಂಬದಲ್ಲಿ ಅಪ್ರಾಪ್ತರು ಬಲಿಯಾಗಿದ್ದರೆ ಪರಿಹಾರ ಸಿಗುವುದಿಲ್ಲ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ೧ ಲಕ್ಷ ರೂ. ಪರಿಹಾರ ಸಿಗಲಿದೆ.

ಕೋವಿಡ್ ಕಾರಣದಿಂದಾಗಿ ಹಲವಾರು ಕುಟುಂಬದಲ್ಲಿ ದುಡಿಯುವವರು ಮೃತಪಟ್ಟಿದ್ದಾರೆ. ಕುಟುಂಬದ ಆಧಾರ ಸ್ತಂಭವನ್ನೇ ಕಳೆದುಕೊಂಡು ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಇಂತಹ ಕುಟುಂಬಗಳ ನೆರವಿಗೆ ಸರ್ಕಾರ ಈಗ ಧಾವಿಸಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, “ಇದಕ್ಕಾಗಿ ಸುಮಾರು ೨೫೦ ರಿಂದ ೩೦೦ ಕೋಟಿ ರೂ. ಖರ್ಚಾಗುತ್ತದೆ. ದೇಶದಲ್ಲೇ ಮೊದಲು ಇಂತಹ ಹಣಕಾಸು ಯೋಜನೆಯನ್ನು ನಾವು ನೀಡುತ್ತಿದ್ದೇವೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ” ಎಂದರು.
ಈ ಘೋಷಣೆಗೂ ಮೊದಲು ಹಣಕಾಸು ಸಚಿವರೂ ಆಗಿರುವ ಯಡಿಯೂರಪ್ಪ ಆರ್ಥಿಕ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ. ಎಸ್. ಎನ್. ಪ್ರಸಾದ್, ಇಲಾಖೆ ಕಾರ್ಯದರ್ಶಿಗಳಾದ ಪಿ. ಸಿ. ಜಾಫರ್, ಏಕ ರೂಪ್ ಕೌರ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

Girl in a jacket
error: Content is protected !!