ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರೀಕರಿಗೂ ವ್ಯಾಕ್ಸಿನ್ ಸೌಲಭ್ಯ – ಜೊಲ್ಲೆ ಭರವಸೆ

Share

çಬೆಂಗಳೂರು ಮೇ,17:ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೆ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರನ್ನು ಕೊರೊನಾ ಸೇನಾನಿಗಳೆಂದು ಭಾವಿಸಿ ಅವರಿಗೂ ಲಸಿಕೆಯನ್ನು ನೀಡಬೇಕು, ಹಾಗೂ ಹೈಕೋರ್ಟ್ ಆದೇಶದಂತೆ ಹಿರಿಯ ನಾಗರಿಕರಿಗೆ ಹಾಗೂ ವಿಕಲ ಚೇತನರಿಗೆ ಆದ್ಯತೆಯ ಮೇರೆಗೆ ವ್ಯಾಕ್ಸಿನ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು  ಸಚಿವರಿಗೆ ಮನವಿ ಮಾಡಿದರು.

ಅಲ್ಲದೆ ಪ್ರಮುಖವಾಗಿ ಎಲ್ಲಾ ಜಿಲ್ಲಾ ಹಾಗೂ ತಾಲೂಕಾ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗಾಗಿ ಬೆಡ್ ಕಾಯ್ದಿರಿಸುವಂತೆ ಮನವಿ ಮಾಡಿದರು. ಮನವಿ ಸ್ವೀಕರಿಸಿದ ಸುಧಾಕರ್  ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ  ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.

Girl in a jacket
error: Content is protected !!