ನ್ಯಾಯಾಧೀಶರು ಸರ್ವಜ್ಞರಲ್ಲ- ಸಿ.ಟಿ.ರವಿ

Share

ಬೆಂಗಳೂರು,ಮೇ,13: ಲಸಿಕೆ ನೋಡಿಕೆ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ಹೈಕೋರ್ಟ್ ತರಾಟೆಗೆ ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಮತ್ತು ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನ ಹೈಕೋರ್ಟ್ ತರಾಟೆ ತೆಗೆದುಕೊಂಡಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನ್ಯಾಯಾಧೀಶರು ಸರ್ವಜ್ಞರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.Υ
ಗುರುವಾರ ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ತಜ್ಞರ ಸಮಿತಿ ನೀಡುವ ವರದಿಯನ್ನು ಆಧರಿಸಿಯೇ ಕೆಲಸ ಮಾಡುತ್ತದೆ ಕೇಂದ್ರ ಸರ್ಕಾರ ಹೇಳಿದೆ. ಇದನ್ನ ಸುಪ್ರೀಂಕೋರ್ಟ್ ಕೂಡ ಒಪ್ಪಿದೆ ಎಂದು ತಿಳಿಸಿದರು
ಕೊರೊನಾ ಲಸಿಕೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ ತೆಗೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ವೇಳೆ ನ್ಯಾಯಾಧೀಶರು ಸರ್ವಜ್ಞರಲ್ಲ ಎಂದು ಹೇಳಿಕೆ ನೀಡಿದ್ದಾರೆ .

Girl in a jacket
error: Content is protected !!