ಬೆಂಗಳೂರು,ಜು,20-ಆರೋಗ್ಯವಂತ ಸಮಾಜವಿದ್ದಾಗ, ಸಮಾಜದ ಅಭವೃದ್ದಿ ಸಾಧ್ಯ ಈನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಬಡವರಿಗೆ ಹೈಟೆಕ್ ವೈದ್ಯಕೀಯ ಸೌಲಭ್ಯಗಳು ಕಾಂಗ್ರೆಸ್ ಪಕ್ಷದ ಸರ್ಕಾರ ನೀಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು
ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕುರುಬರಹಳ್ಳಿ ಬಯಲು ರಂಗ ಮಂದಿರದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರು ದೇಹದಲ್ಲಿ ಸಮಸ್ಯೆ ಇರಲಿ ಅಥವಾ ಇಲ್ಲದಿರಲಿ ವೈದ್ಯರ ಬಳಿ ಹೋಗಿ ತಪಾಸಣೆ ಮಾಡಿಸಿಕೊಳ್ಳಿ ವೈದ್ಯರ ಸಲಹೆ ಪಡೆದುಕೊಳ್ಳಿ ಅಗತ್ಯ ಬಿದ್ದರೆ ಚಿಕಿತ್ಸೆ ಪಡೆದುಕೊಳ್ಳಿ ಎಂದರು.
ಆರೋಗ್ಯವಂತ ಸಮಾಜವಿದ್ದಾಗ, ಸಮಾಜದ ಅಭವೃದ್ದಿ ಸಾಧ್ಯ ಈನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಬಡವರಿಗೆ ಹೈಟೆಕ್ ವೈದ್ಯಕೀಯ ಸೌಲಭ್ಯಗಳು ಕಾಂಗ್ರೆಸ್ ಪಕ್ಷದ ಸರ್ಕಾರ ನೀಡುತ್ತಿದೆ ಎಂದು ಹೇಳಿದರು.
ಶಕ್ತಿ ಯೋಜನೆಯಿಂದ 500ಕೋಟಿ ಬಾರಿ ಮಹಿಳೆಯರು ಪ್ರಯಾಣಿಸಿ, ದೇಶದಲ್ಲಿಯೆ ವಿನೂತನ ದಾಖಲೆಯಾಗಿದೆ. ಶಕ್ತಿ ಯೋಜನೆಯಿಂದ ನಾಡಿನ ಎಲ್ಲ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ ಮತ್ತು ದೇವಸ್ಥಾನಕ್ಕೆ ಅದಾಯ ಹೆಚ್ಚಳದ ಜೊತೆಗೆ ದೇವಸ್ಥಾನದ ಸುತ್ತಮುತ್ತಲು ವ್ಯಾಪಾರ, ವಹಿವಾಟುಗಳು ಭರದಿಂದ ವ್ಯಾಪಾರ ಮಾಡಿ ಆರ್ಥಿಕವಾಗಿ ಸಧೃಡರಾಗಿದ್ದಾರೆ ಎಂದು ಹೇಳಿದರು.
ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪುಣ್ಯ ಆಸ್ಪತ್ರೆ , ನೇತ್ರಧಾಮ ಆಸ್ಪತ್ರೆ ವೈದ್ಯರು ಸಿಬ್ಬಂದಿಗಳು ಭಾಗವಹಿಸಿದ್ದರು.
ಶಿಬಿರದಲ್ಲಿ ಕಿವಿ,ಮೂಗು, ಗಂಟಲು ಜನರಲ್ ತಪಾಸಣೆ, ಸ್ತ್ರೀ ರೋಗ ತಪಾಸಣೆ , ಮಧುಮೇಹ, ಬಿಪಿ ಮತ್ತು ಇಸಿಜಿ, ಹಿಮೋಗ್ಲೋಬಿನ್ ಪರೀಕ್ಷೆ ನೂರಾರು ಜನರಿಗೆ ತಪಾಸಣೆ ಮಾಡಲಾಯಿತು.
ಕಾಂಗ್ರೆಸ್ ಪಕ್ಷದ ಮುಖಡರಾದ ವಿ.ಎಸ್.ಆರಾಧ್ಯ, ಶಿವಕುಮಾರ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳಾದ ಸುಧೀಂದ್ರ, ಪರಿಸರ ರಾಮಕೃಷ್ಣ ,ಗ್ಯಾರೆಂಟಿ ಯೋಜನೆಗಳ ನಗರ ಉಪಾಧ್ಯಕ್ಷ ಜನಾರ್ಧನ್, ಸೇವಾದಳ ಬ್ಲಾಕ್ ಅಧ್ಯಕ್ಷರಾದ ಕೃಷ್ಣ ಬಿಸ್ಟ್ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳು, ಕಾರ್ಯಕರ್ತರು ಭಾಗವಹಿಸಿದ್ದರು.