ಬಿಡಿಎ ಉದ್ದೇಶಿತ ನಿವೇಶನ,ಪ್ಲಾಟ್ ಗಳ ಶುಲ್ಕಹಿಂಪಡಿಯಲು ಎಫ್ ಕೆಸಿಸಿ ಐ ಮನವಿ

Share
Showing 1 of 1

ಬೆಂಗಳೂರು,ಜೂ,28:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿವೇಶನ ಮತ್ತು ಪ್ಲಾಟ್ ಗಳ ಖರೀದಿ ಶುಲ್ಕ ಹೆಚ್ಚಳಕ್ಕೆ ಮುಂದಾಗಿದ್ದು ಅದನ್ನು ಹಿಂಪಡಿಯುವಂತೆ ಕರ್ನಾಟ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ.
ಕರ್ನಾಟಕ ವಾಣಿಜ್ಯ ಮತ್ತುಕೈಗಾರಿಕಾ ಮಹಾಸಂಸ್ಥೆ
ಅಧ್ಯಕ್ಷ ಪೆರಿಕಲ್ ಎಂ ಸುಂದರ್ ರವರು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕೋವಿಡ್-19 ಸಾಂಕ್ರಾಮಿಕ ರೋಗ 2ನೇ ಅಲೆಯಿಂದಾಗಿ ಕೈಗಾರಿಕೋದ್ಯಮಿಗಳು ವ್ಯಾಪಾರಸ್ಥರು, ಮಧ್ಯಮ ವರ್ಗದವರು ಹಾಗೂ ಜನಸಾಮಾನ್ಯರು ಈಗಾಗಲೇ ಆರ್ಥಿಕ ನಷ್ಟ ಅನುಭವಿಸಿದ್ದು, ಈ ಸಮಯದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಪ್ರಸ್ತಾಪಿಸಿರುವ ಉದ್ದೇಶಿತ ಶುಲ್ಕ ಹೆಚ್ಚಳವನ್ನು ಹಿಂತೆಗೆದುಕೊಳ್ಳಬೇಕೆಂದು ಮರುಪರಿಶೀಲಿಸಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪ್ರಸ್ತುತ ಇರುವ ವಿದ್ಯುತ್ ತೆರಿಗೆಯನ್ನು 9% ರಿಂದ 3% ಗೆ ಇಳಿಸಿದಲ್ಲಿ ಸಾಂಕ್ರಾಮಿಕ ರೋಗದ ಸಮಸ್ಯೆಯಿಂದ ಬಳಲುತ್ತಿರುವ ಉದ್ಯಮ ವಲಯಕ್ಕೆ ಹಾಗೂ ಅದರಲ್ಲೂ ಕಿರು, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ (ಎಂಎಸ್‍ಎಂಇ) ಗಳಿಗೆ ಜೀವದಾನ ನೀಡಿದಂತಾಗುತ್ತದೆ ಹಾಗೂ ಆರ್ಥಿಕ ಸಂಕಷ್ಟವನ್ನು ದೂರ ಮಾಡಿದಂತಾಗುತ್ತದೆ ಎಂದು ಒತ್ತಾಯಿಸಿದರು.
ಮನವಿಗಳನ್ನು ಸ್ವೀಕರಿಸಿ ಬಿಡಿಎ ಉದ್ದೇಶಿಸಿರುವ ಶುಲ್ಕದ ಬಗ್ಗೆ ಬಿಡಿಎ ಅಧ್ಯಕ್ಷರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಹಾಗೂ ವಿದ್ಯುತ್ ತೆರಿಗೆ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರಿಸುತ್ತೇನೆ ಎಂದು ಸಿಎಂ ಭರವಸೆ ನೀಡಿದರು.

Girl in a jacket
error: Content is protected !!