ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಅನಾವರಣ
by ಕೆಂಧೂಳಿ
ಬೆಂಗಳೂರು, ಜ,27-ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಆವರಣದಲ್ಲಿ ನಿರ್ಮಿಸಲಾದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗಳಿಸಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್, ವಿಧಾನ ಪರಿಷತ್ ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್,
ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಶಿವಾಜಿನಗರ ವಿಧಾನಸಭಾ ಕ್ಷೇತ್ರ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.