ಶೋಷಿತ ದಲಿತರ ಸಮಸ್ಯೆ ನಿವಾರಣೆಗೆ ಬದ್ದ- ಸಿಎಂ

Share

ಶೋಷಿತ ದಲಿತರ ಸಮಸ್ಯೆ ನಿವಾರಣೆಗೆ ಬದ್ದ- ಸಿಎಂ

by-ಕೆಂಧೂಳಿ

ಬೆಂಗಳೂರು, ಫೆ,18-ಶೋಷಿತ ಮತ್ತು ದಲಿತರ ಸಮಸ್ಯೆಗಳನ್ನು ನಾನು ನಿರಂತರವಾಗಿ ನಿವಾರಿಸಿಕೊಂಡು ಬರುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ 24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಾವು. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.

ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ. ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು. ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Girl in a jacket
error: Content is protected !!