ಹುಬ್ಬಳ್ಳಿ, ಮಾ, 27: ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ, ಮುಕ್ತವಾಗಿ, ಧೈರ್ಯವಾಗಿ ಬರೆಯಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಕಲ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುವುದು ಎಂದರು.