ಬೆಂಗಳೂರು ಚಲನಚಿತ್ರೋತ್ಸವಕ್ಕೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್
 by-ಕೆಂಧೂಳಿ
ಬೆಂಗಳೂರು,ಫೆ,೨೦- ಬರುವ ಮಾರ್ಚ್ ೧ ರಿಂದ ಆರಂಭವಾಗಲಿರುವ ೧೬ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತಡೆ ನೀಡಲು ಕೋರಿದ್ದ ಕೆಲ ನಿರ್ಮಾಪಕರು ತಡೆ ನೀಡಲು ಕೋರಿದ್ದ ಅರ್ಜಿಯನ್ನು ಪುರಸ್ಕರಿಸಿತಾದರೂ ತಡೆ ನೀಡಲು ಹೈಕೋರ್ಟ ನಿರಾಕರಿಸಿ ಕನ್ನಡ ಚಲನಚಿತ್ರ ಅಕಾಡೆಮಿಗೆ ತುರ್ತು ನೊಟೀಸ್ ಜಾರಿಗೆ ಆದೇಶಿಸಿದೆ.
ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಮ್ಮ ಚಲನಚಿತ್ರಗಳನ್ನು ಪರಿಗಣಿಸಿಲ್ಲ’ ಎಂದು ‘ಸಂವಿಧಾನ ಸಿನಿ ಕಂಬೈನ್ಸ್’ ಸೇರಿದಂತೆ ಒಂಬತ್ತು ಸಿನಿಮಾ ನಿರ್ಮಾಪಕರು ತಡೆ ಕೋರಿ ಹೈಕೊರ್ಟ್ಗೆ ಅರ್ಜಿಸಲ್ಲಿದ್ದವು
ತುಮಕೂರಿನ ‘ಸಂವಿಧಾನ ಸಿನಿ ಕಂಬೈನ್ಸ್’ನ ಎ.ವಿ.ನಾಗರಾಜು (ಟೈಗರ್ ನಾಗ್)ಸೇರಿ ಒಂಬತ್ತು ಪ್ರತ್ಯೇಕ ಸಂಸ್ಥೆಗಳ ನಿರ್ಮಾಪಕರು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್, ‘ಅರ್ಜಿದಾರರು ಚಿತ್ರಗಳನ್ನು ಆಯ್ಕೆ ಸಮಿತಿ ವೀಕ್ಷಿಸಿಲ್ಲ. ಹೊಸದಾಗಿ ಸಮಿತಿ ರಚಿಸಬೇಕು’ ಎಂದು ಕೋರಿದರು.
ಇದಕ್ಕೆ ನ್ಯಾಯಪೀಠ, ‘ಚಲನಚಿತ್ರೋತ್ಸವಕ್ಕೆ ಈಗಾಗಲೇ ಸಿದ್ಧತೆ ಆಗಿದೆ. ಈ ಹಂತದಲ್ಲಿ ತಡೆಯಾಜ್ಞೆ ನೀಡಲಾಗದು’ ಎಂದು ಪ್ರತಿಕ್ರಿಯಿಸಿತು.. ಇದೇ ೨೪ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಬೆಂಗಳೂರು ಚಲನಚಿತ್ರೋತ್ಸವಕ್ಕೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್
		Share		
		
	
	
			 
                                         
					
										
												
				
 
									 
									