ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಪುಣ್ಯಸ್ನಾನ ಮಾಡಿದ ಡಿ.ಕೆ.ಶಿ.ಕುಟುಂಬ 

Share

ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಪುಣ್ಯಸ್ನಾನ ಮಾಡಿದ ಡಿ.ಕೆ.ಶಿ.ಕುಟುಂಬ 

by- ಕೆಂಧೂಳಿ

ಬೆಂಗಳೂರು, ಫೆ,09- ದೇಶದ ವಿವಿಧ ಪಕ್ಷಗಳ ರಾಜಕೀಯ ನಾಯಕರು ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಪುಣ್ಯಸ್ನಾನ ಮಾಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ,ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಕುಂಭ ಮೇಳದಲ್ಲಿ ಪಾಲ್ಗೊಂಡು ಗಮನಸೆಳೆದರು.


ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕುಂಭ ಮೇಳದ ಬಗ್ಗೆ ನೀಡಿದ ಹೇಳಿಕೆಗೆ ಟೀಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರೇ ಕುಂಭ ಮೇಳದಲ್ಲಿ ಪಾಲ್ಗೊಂಡು ಭಕ್ತಿ ಪ್ರದರ್ಶನ ಮಾಡುತ್ತಿರುವುದು ಮತ್ತಷ್ಟು ವಿಶೇಷವಾಗಿದೆ.

ಮಹಾ ಕುಂಭ ಮೇಳದಲ್ಲಿ ಪಾಲ್ಗೊಂಡಿರುವ ಬಗ್ಗೆ ಡಿಕೆ ಶಿವಕುಮಾರ್ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪುಣ್ಯ ಸ್ನಾನದ ಫೋಟೊಗಳನ್ನು ಹಂಚಿಕೊಂಡಿದ್ದಾರೆ. “ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದೆ. 144 ವರ್ಷಗಳಿಗೊಮ್ಮೆ‌ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ.” ಎಂದು ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.

ಡಿ.ಕೆ ಶಿವಕುಮಾರ್ ಪುತ್ರಿ ಭೇಟಿ
ಇದಕ್ಕೂ ಮುನ್ನ ಡಿ ಕೆ ಶಿವಕುಮಾರ್ ಮಗಳು ಕೂಡ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಪಾಲ್ಗೊಂಡಿದ್ದರು. ಮಹಾಕುಂಭಮೇಳದಲ್ಲಿ ಭಾಗವಹಿಸಿದ್ದ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ.

Girl in a jacket
error: Content is protected !!