ಮೇಕೆದಾಟು ಯೋಜನೆ ಶೀಘ್ರ ಜಾರಿಗೊಳಿಸಿ-ಎಚ್‌ಡಿಕೆ

Share

ಬೆಂಗಳೂರು, ಜೂ.೧೯:ಮೇಕೆ ದಾಟು ಯೋಜನೆಜಾರಿಗೊಳಿಸುವ ಕುರಿಂತೆ ಶೀಘ್ರ ಕೇಂದ್ರ ಸರ್ಕಾರದ ಗಮನಹರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರವೂ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮೇಕೆದಾಟು ಯೋಜನೆ ವಿಚಾರವಾಗಿ ಎನ್‌ಜಿಟಿ ದಕ್ಷಿಣ ಪೀಠ ಆರಂಭಿಸಿದ್ದ ಸ್ವಯಂ ಪ್ರೇರಿತ ವಿಚಾರಣೆಯನ್ನು ಪ್ರಧಾನ ಪೀಠ ಇತ್ಯರ್ಥಪಡಿಸಿದೆ. ಯೋಜನೆಗಿದ್ದ ಅಡ್ಡಿಯೊಂದು ನಿವಾರಣೆಯಾಗಿದೆ. ಈಗ ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದು ಅವರು ಹೇಳಿದ್ದಾರೆ.
ಕೇಂದ್ರ-ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಸ್ವರ್ಗ ಸೃಷ್ಟಿಯಾಗುವುದಾಗಿ ಬಿಜೆಪಿ ಹೇಳಿತ್ತು. ಸ್ವರ್ಗ ಬೇಡ, ಅನಿಶ್ಚಿತತೆಯಲ್ಲಿ ತೂಗುತ್ತಿರುವ ಮೇಕೆದಾಟು ಯೋಜನೆಗೆ ಪರಿಸರ ಅನುಮತಿಯನ್ನು ಶೀಘ್ರ ಪಡೆದುಕೊಂಡರೆ ಸಾಕು. ನಮ್ಮ ನೆಲ, ಜಲ, ಧನ ಬಳಸಿ ನಮ್ಮವರ ದಾಹ ನೀಗಿಸುವ ಯೋಜನೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಇನ್ನು ನಿರ್ಲಕ್ಷ್ಯ ತೋರಬಾರದು ಎಂದು ಅವರು ತಿಳಿಸಿದ್ದಾರೆ.
ಕೇಂದ್ರದ ಅನುಮತಿ ಸಿಕ್ಕ ಕೂಡಲೇ ಯೋಜನೆ ಆರಂಭಿಸುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ಹೇಳಿಕೆಯನ್ನು ಸೋದರ ಎಂ.ಕೆ.ಸ್ಟಾಲಿನ್ ವಿರೋಧಿಸಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆಯಾಗುತ್ತಿರುವ ಪ್ರಕರಣವೊಂದರಲ್ಲಿ ಕರ್ನಾಟಕ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ ಎಂಬುದು ಅವರ ಆರೋಪ. ವಿಚಾರಣೆಯಾಗುತ್ತಿರುವ ಯೋಜನೆಯೊಂದಕ್ಕೆ ತಡೆ ತರಲು ಪ್ರಧಾನಿಯನ್ನು ಭೇಟಿಯಾಗಿದ್ದೂ ತಪ್ಪಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

Girl in a jacket
error: Content is protected !!