ಮೈಸೂರು ಐವರು ಅತ್ಯಾಚಾರ ಆರೋಪಿಗಳ ಬಂಧನ

Share

ಬೆಂಗಳೂರು, ಆ,೨೮: ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿನಡೆದಿದ್ದ, ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ತಮಿಳುನಾಡಿನಲ್ಲಿಪೊಲೀಸರು ಬಂಧಿಸಿದ್ದಾರೆ.

ಈ ಮೂಲಕ ಘಟನೆ ನಡೆದ ಐದು ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಘಟಮಾ ಸ್ಥಳದಲ್ಲಿ ತಮಿಳುನಾಡು ಬಸ್‌ಟಿಕೆಟ್ ದೊರೆತ ಹಿನ್ನೆಯಲ್ಲಿ ಅದೇ ಜಾಡು ಹಿಡಿದು ತನಿಖಾ ತಂಡ ಈ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದರೆ, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು. ಇತ್ತ ಯುವಕ ಹಾಗೂ ಯುವತಿ ಮೂರು ದಿನ ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿ, ನಾಲ್ಕನೇ ದಿನ ಕಾಮುಕರು ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೈಸೂರಿನಲ್ಲಿ ಅವರು ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು ಈ ಇಬ್ಬರು ಜೋಡಿಗಳನ್ನು ಮೂರು ದಿನಗಳಿಂದ ಹಿಂಬಾಲಿಸಿ ಕೊನೆಗೆ ಈ ಕೃತ್ಯ ಎಸಗಲಾಗಿದೆ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ
ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ಎಂಬಿಎ ವಿದ್ಯಾರ್ಥಿನಿಯೊಬ್ಬಳು ಅಂದು ಸಂಜೆ ೭.೩೦ರ ವೇಳೆಗೆ ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ತೆರಳಿದ್ದಾಗ ಹುಡುಗನ ಮೇಲೆ ಹಲ್ಲೆ ನಡೆಸಿ, ವಿದ್ಯಾರ್ಥಿನಿಯ ಮೇಲೆ ಪಾನಮತ್ತರಾಗಿದ್ದ ಐದಾರು ಮಂದಿ ಯುವಕರ ತಂಡ ಸಾಮೂಹಿಕ ಅತ್ಯಾಚಾರ ನಡೆಸಿತ್ತು. ಸಾಮೂಹಿಕ ಅತ್ಯಾಚಾರ ನಡೆಸಿದ ನಂತರ ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡಿದ್ದರು ಎನ್ನಲಾಗಿತ್ತು. ವಿದ್ಯಾರ್ಥಿನಿ ಹಾಗೂ ಆಕೆಯ ಗೆಳೆಯನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಒಂದು ಘಟನೆ ಸಾಂಸ್ಕೃತಿಕ ನಗರಿ ಮೈಸೂರನ್ನು ಬೆಚ್ಚಿಬೀಳಿಸಿತ್ತು. ಶೀಘ್ರವೇ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಅತ್ಯಾಚಾರ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಘಟನಾ ಸ್ಥಳದಲ್ಲಿ ಮೊಬೈಲ್ ಲೊಕೇಷನ್ ಪರಿಶೀಲನೆ ನಡೆಸಿದ್ದರು. ಪೊಲೀಸರಿಗೆ ಸ್ಥಳದಲ್ಲಿ ೩೪ ಸಾಕ್ಷ್ಯಗಳು ದೊರೆತಿದ್ದವು,. ಸ್ಥಳದಲ್ಲಿ ಸಿಕ್ಕಿದ್ದ ಮದ್ಯದ ಬಾಟಲ್ ಸಂಗ್ರಹಿಸಿ ಅದರ ಬಾರ್ ಕೋಡ್‌ಗಳ ಪರಿಶೀಲನೆ ನಡೆಸಿ, ಮದ್ಯ ಖರೀದಿ ಮಾಡಿರುವ ಮದ್ಯದಂಗಡಿಗಳಲ್ಲಿರುವ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದ್ದರು. ಪ್ರಕರಣದ ತನಿಖೆಗೆ ಎಡಿಜಿಪಿ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಐದು ತಂಡಗಳನ್ನುರಚಿಸಲಾಗಿತ್ತು.

ದುಷ್ಕರ್ಮಿಗಳು ನಮ್ಮ ಜೊತೆ ಗಲಾಟೆ ಮಾಡಿ, ನನ್ನ ತಲೆಗೆ ಕಲ್ಲಿನಿಂದ ಹೊಡೆದರು. ನಾನು ಪ್ರಜ್ಞೆ ತಪ್ಪಿ ಬಿದ್ದಾಗ ಹುಡುಗಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ,ಎಂದು ಅತ್ಯಾಚಾರ ಸಂತ್ರಸ್ತೆಯ ಗೆಳೆಯ ಶುಕ್ರವಾರ ಹೇಳಿಕೆ ನೀಡಿದ್ದನು. ಯುವತಿ ಹಾಗೂ ಆಕೆಯ ತಂದೆ ತಾಯಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ರಾಜ್ಯಕ್ಕೆ ಮರಳಿದ್ದಾರೆ.

 

 

Girl in a jacket
error: Content is protected !!