ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರ ದಾಳಿ
by ಕೆಂಧೂಳಿ
ಬೆಂಗಳೂರು, ಜ,31- ರಾಜ್ಯದ ಹಲವೆಡೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದಾರೆ.
ರಾಯಚೂರು ,ಬೆಳಗಾವಿ ಮತ್ತು ಬಾಗಲಕೋಟೆಯ ಅಧಿಕಾರಿಗಳ ಮನೆ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬಾಗಲಕೋಟೆಯಲ್ಲಿ ಪಿಡಿಒ ಎಸ್.ಪಿ. ಹಿರೇಮಠ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಐಷಾರಾಮಿ ಮನೆ, ಅಪಾರ ಪ್ರಮಾಣದ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ, ರಾಯಚೂರು, ಬೆಳಗಾವಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.