ಬೆಂಗಳೂರು, ಏ,16– ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವರ ಜೊತೆ ಲಾರಿ ಮಾಲೀಕರು ನಡೆಸಿದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಲಾರಿಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ.
14 ಸೋಮವಾರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದು ನಿನ್ನೆಗಿಂತ ಇಂದು ಮುಷ್ಕರ ತೀವ್ರ ಸ್ವರೂಪ ಪಡೆದಿದೆ. ರಾಜ್ಯದಲ್ಲಿ ಲಾರಿಗಳ ಸಂಚಾರ ಬಂದ್ ಆಗಿದೆ. ಬೆಂಗಳೂರಿನ ಯಶವಂತಪುರ ಎಪಿಎಂಸಿಗೆ ಲಾರಿಗಳ ಬಂದಿಲ್ಲ. ಎಪಿಎಂಸಿಯಲ್ಲಿ ಲಾರಿಗಳು ನಿಂತಲ್ಲೇ ನಿಂತಿವೆ.
ನಿನ್ನೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಲಾರಿ ಮಾಲೀಕರ ಜೊತೆ ನಡೆಸಿದ ಮೊದಲ ಸುತ್ತಿನ ಸಭೆ ವಿಫಲವಾಯಿತು. ನಂತರ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಅವರು ಲಾರಿ ಮಾಲೀಕರ ಜೊತೆ ನಡೆಸಿದ ಸಂಧಾನ ಸಭೆ ವಿಫಲವಾದ ಹಿನ್ನೆಲೆ ಲಾರಿ ಮಾಲೀಕರು, ಚಾಲಕರು ಮುಷ್ಕರ ಮುಂದುವರೆಸಿದ್ದಾರೆ.