ಬೆಂಗಳೂರು, ಮೇ ೨೮: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂದಿಸಿದಂತೆ ಎಸ್ಐಟಿ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿಲ್ಲ ಅಲ್ಲದೆ ಎಸ್ಐಟಿ ಮುಖ್ಯಸ್ಥ ಸೋಮೇಂದರ್ ಮುಖರ್ಜಿ ರಜೆ ಮೇಲೆ ತೆರಳಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ
ಆರೋಪಿತ ಮಾಜಿ ಸಚಿವರ ಪರವಾಗಿ ಗೃಹ ಸಚಿವರಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದಲ್ಲಿ ಅವರು ಇಷ್ಟು ದಿನ ಬಿಟ್ಟು ಈಗಾ ಮಾತನಾಡಲು ಕಾರಣ ಇದೆ. ಹೈ ಕೋರ್ಟ್ ನಲ್ಲಿ ರಿಟ್ ಪಿಟಿಷನ್ ದಾಖಲಾಗಿದೆ.
ತನಿಖಾ ವರದಿ ಕೊಡುವಂತದ್ದು ಇದೆ. ಈ ಹಿನ್ನೆಲೆಯಲ್ಲಿ ತನಿಖೆ ದಿಕ್ಕು ತಪ್ಪಿಸಲು, ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಲು ಈ ರೀತಿ ಹೇಳಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರವಿದ್ದಾಗ ಹೆಣ್ಣುಮಗಳು ಆರೋಪಿಸಿದ್ದರೂ ಮೇಟಿ ಅವರ ಮೇಲೆ ಎಫ್.ಐ.ಆರ್ ಆಗಿರಲಿಲ್ಲ. ಪ್ರಕರಣ ಮುಚ್ಚಿ ಹಾಕಿದರು. ಅವರಿಂದ ನೈತಿಕತೆ ಪಾಠ ಕಲಿಯಬೇಕಿಲ್ಲ ಎಂದು ಅವರು ತಿಳಿಸಿದರು.
ಗ್ಯಾಂಗ್ ರ್ಯಾಪ್-ಆರು ಆರೋಪಿಗಳ ಬಂಧನ
ಗ್ಯಾಂಗ್ ರೇಪ್ ಆಗಿರೋ ವೀಡಿಯೋ ವೈರಲ್ ಆಗಿದ್ದು, ಆ ವ್ಯಕ್ತಿಗಳು ಯಾರು ಅಂತ ಸಂಶಯ ಇತ್ತು. ನಮ್ಮ ಕೇಂದ್ರ ಸಚಿವರು ಈ ಬಗ್ಗೆ ಟ್ವೀಟ್ ಮಾಡಿದ್ದರು. ಆ ಹಿನ್ನೆಲೆಯಲ್ಲಿ ನಮ್ಮ ಪೊಲೀಸರು ಮಾಹಿತಿ ಪಡೆದು ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ ಎಂದರು. ಇನ್ನೂ ಕೆಲವರು ಕೇರಳದಲ್ಲಿದ್ದಾರೆ ಎಂಬ ಮಾಹಿತಿ ಬಂದಿದೆ. ರಾಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲವೇ ಗಂಟೆಗಳಲ್ಲಿ ನಮ್ಮ ಬೆಂಗಳೂರು ಪೊಲೀಸರು ಕೆಲಸ ಮಾಡಿದ್ದು ಅವರನ್ನು ಶ್ಲಾಘಿಸುತ್ತೇನೆ ಎಂದು ಅವರು ಹೇಳಿದರು.
ಮೊದಲು ಎಲ್ಲಿ ನಡೆದಿದ್ದು, ಯಾವ ಜಾಗ ಅಂತ ಗೊತ್ತಿರಲಿಲ್ಲ. ಟ್ರೇಸ್ ಮಾಡಿದಾಗ ಬೆಂಗಳೂರು ಅಂತ ಗೊತ್ತಾಗಿತ್ತು. ಬಳಿಕ ರಾಮ ಮೂರ್ತಿನಗರದಲ್ಲಿ ಅಂತ ಗೊತ್ತಾಯಿತು. ಐದಾರು ಮಂದಿಯನ್ನು ಬಂಧಿಸಲಾಗಿದೆ. ನಗರ ಪೊಲೀಸ್ ಆಯುಕ್ತರೇ ಈ ಪ್ರಕರಣದ ಸೂಪರ್ ವೈಸ್ ಮಾಡಿರುವುದಾಗಿ ಅವರು ತಿಳಿಸಿದರು.
ಲಾಕ್ ಡೌನ್ ವೇಳೆ ಕಠಿಣ ಕ್ರಮಕ್ಕೆ ಸೂಚಿಸಿದ್ದೇವೆ. ಯಾವುದೇ ಕಾರಣಕ್ಕೂ ಲಾಕ್ ಡೌನ್ ವೇಳೆ ಸಡಿಲಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು. ಸಚಿವ ಸಿಪಿ ಯೋಗೇಶ್ವರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅವರವರ ಹೇಳಿಕೆಗೆ ಅವರೇ ಬದ್ಧರಾಗಿರ್ತಾರೆ.ಎಲ್ಲದಕ್ಕೂ ನಾನು ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಹೇಳಿದರು.
ಸಿಡಿ ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ-ಬೊಮ್ಮಾಯಿ
Share