ಬೆಂಗಳೂರು, ಮೇ,26:ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಎಚ್.ಎಸ್.ದೊರೆಸ್ವಾಮಿ ಹೃದಯಾಘಾತದಿಂದ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.
ಅವರಿಗೆ 104 ವರ್ಷ ವಯಸ್ಸಾಗಿತ್ತು.ಇತ್ತೀಚೆಗಷ್ಟೆ ಅವರಿಗೆ ಕೊರೊನಾ ಸೋಕು ತಗುಲಿದ್ದು ಗುಣಮುಖರಾಗಿದ್ದರು.ಆದರೆ ಕೆಲ ದಿನಗಳ ಹಿಂದೆ ತೀವ್ರ ಹೃದಯಾಘಾತವಾದಾಗ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯಿಸಿರೆಳದಿದ್ದಾರೆ.
೧೯೧೮ ಏಪ್ರಿಲ್ ೧೦ ರಂದು ಹಾರೋಹಳ್ಳಿಯಲ್ಲಿ ಜನಸಿದ್ದ ಅವರು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗಿಯಾಗಿದ್ದರು,ನಂತರ ಜೈಲುವಾಸ ಅನುಭವಿಸಿದ್ದರು.ಗಾಂಧಿ ಅನುಯಾಯಿಯಾದ ಅವರು ಅವರ ಸಿದ್ದಾಂತಗಳನ್ನು ಅಳವಡಿಸಿಕೊಂಡಿದ್ದರು.೧೪ ತಿಂಗಳುಗಳಕಾಲ ಜೈಲುವಾಸ ಅನುಭವಿಸಿ ಹೊರಬಂದ ನಂತರ ಅವರು ಪತ್ರಿಕೆಯನ್ನು ಆರಂಭಿಸಿದ್ದರು.
ಪತ್ರಿಕೆ ಹಾಗೂ ಪ್ರಕಾಶಕರೂ ಅಗಿದ್ದ ಅವರು ನಂತರ ಹಲವಾರು ಚಳವಳಿಯಲ್ಲಿ ಭಾಗವಹಿಸಿದ್ದರು..ಇತ್ತೀಚಗೆ ಭೂಕಬಳಿಕೆ ,ಕನ್ನಡಚಳವಳಿ ಹಾಗೂ ಸಾಮಾಜಿಕ ಚಳವಳಿಗಳಲ್ಲಿ ಭಾಗವಹಿಸಿದ್ದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಭ್ರಷ್ಟಚಾರ ಹಿನ್ನೆಲೆಯುಳ್ಳ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಾರದು ಎಂದು ಬಹಿರಂಗವಾಗಿಯೇ ಧ್ವನಿ ಎತ್ತಿದ್ದರು.
ವಿಶೇಷವಾಗಿ ಅವರು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುತ್ತಿದ್ದರು.
ದೊರೆಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಪ್ರಧಾನ ಎಚ್.ಡಿ.ದೇವೇಗೌಡ ಸೇರಿದಂತೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.