ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹೃದಯಾಘಾತದಿಂದ ನಿಧನ

Share

ಚಿಕ್ಕಮಗಳೂರು,ಜು,12: ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ(43) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ಹಾಯ್ ಬೆಂಗಳೂರು ಪತ್ರಿಕೆ ಮೂಲಕ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಸುನೀಲ್ ಹೆಗ್ಗರವಳ್ಳಿ ಚಿಕ್ಕಮಗಳೂರಿನ ಗೋಣಿಬೀಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು. ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ಅನಾರೋಗ್ಯದ ಸನ್ನಿವೇಶದಲ್ಲಿ ಪತ್ರಿಕೆಯನ್ನು ಸಂಪಾದಕನಾಗಿ ಮುನ್ನಡೆಸಿದ್ದರು.

ಶೂಟೌಟ್ ವಿವಾದದ ಸನ್ನಿವೇಶದಲ್ಲಿ ರವಿ ಬೆಳಗೆರೆ ಅವರ ಮೇಲೆಯೇ ಸುಪಾರಿ ಆರೋಪ ಮಾಡಿ ಹಾಯ್ ಬೆಂಗಳೂರು ಕಚೇರಿಯಿಂದ ಹೊರಬಿದ್ದಿದ್ದರು ಹೆಗ್ಗರವಳ್ಳಿ.ಒಂದು ವರ್ಷ ಜನಶ್ರೀ ಟಿವಿ ಸಂಪಾದಕರಾಗಿಯೂ ಕಾರ್ಯ ನಿರ್ಹಿಸಿದ್ದರು.ಆದರೆ ರವಿ ಬೆಳಗೆರೆ ಅವರಿಗೂ ಮನಸ್ಥಾಪ ಉಂಟಾದ ಕಾರಣ ದಿಡೀರ್ ಆಸ್ಥಾದಿಂದ ಕಿತ್ತು ಹಾಕಲಾಗಿತ್ತು. ನಂತರ ಚಾರ್ಲಿ ಟೈಮ್ಸ್ ಕ್ರೈಮ್ ಪೇಪರ್ ಶುರುಮಾಡಿದ್ದರು ಯೂ ಟ್ಯೂಬ್ ಚಾನೆಲ್ ಕೂಡ ಆರಂಭಿಸಿ ಗಮನ ಸೆಳೆದಿದ್ದರು.

Girl in a jacket
error: Content is protected !!