ನವದೆಹಲಿ, ಮೇ ೨೩: ಗಡಿ ಭದ್ರತಾ ಸಿಬ್ಬಂದಿಮತ್ತು ದಿಮಸಾ ನ್ಯಾಷನಲ್ಲಿಬರೇಷನ್ ಆರ್ಮಿನಡುವೆ ನಡೆದ ಗುಂಡಿನಚಕಮಕಿಯಲ್ಲಿಆರು ಉಗ್ರರು ಮೃತ ಪಟ್ಟ ಘಟನೆ ಅಸ್ಸಾಂ ಮತ್ತು ನಾಗಲ್ಯಾಂಡ್ ಗಡಿ ಪ್ರದೇಶದಲ್ಲಿ ಸಂಭವಿಸಿದೆ.
ಅಸ್ಸಾಂ ರೈಫಲ್ಸ್ ಪರ್ಸನಲ್ ಮತ್ತು ಪೊಲೀಸರು ಪಶ್ಚಿಮ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಸೋನೋವಲಾ ತಿಳಿಸಿದ್ದಾರೆ.
ಉಗ್ರರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ಮಿಚಿಬೈಲಂಗ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭದ್ರತಾ ಪಡೆ ಸಿಬ್ಬಂದಿ ನಡೆಸಿರುವ ಪ್ರತಿದಾಳಿಯಲ್ಲಿ ಡಿಎನ್‌ಎಲ್‌ಎ ಸಂಘಟನೆಯ ಆರು ಉಗ್ರರು ಪ್ರಾಣ ಬಿಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ದಿಮಸಾ ನ್ಯಾಷನಲ್ ಲಿಬರೇಷನ್ ಆರ್ಮಿಗೆ ಸೇರಿದ ಮೃತ ಆರು ಉಗ್ರರ ಬಳಿಯಿದ್ದ ನಾಲ್ಕು ಎಕೆ-೪೭ ರೈಫಲ್ ಹಾಗೂ ಮದ್ದುಗುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ ಮಿಚಿಬೈಲಂಗ್ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಅನುಮಾನ ವ್ಯಕ್ತವಾಗಿದ್ದು, ಸೇನಾ ಕಾರ್ಯಾರಣೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಸ್ಸಾಂ ನಲ್ಲಿ ಭದ್ರತಾ ಪಡೆ ಗುಂಡಿಗೆ ಆರು ಉಗ್ರರು ಬಲಿ
Share