ಇರಿತಕ್ಕೊಳಗಾಗಿದ್ದ ಸೈಫ್  ಅಲಿಖಾನ್ ಮೊದಲ ಶಸ್ತ್ರ ಚಿಕಿತ್ಸೆ ಯಶಸ್ವಿ

Share

ಇರಿತಕ್ಸೈಕೊಳಗಾಗಿದ್ದ ಸೈಫ್  ಅಲಿ ಖಾನ್ ಮೊದಲ ಶಸ್ತ್ರ ಚಿಕಿತ್ಸೆ ಯಶಸ್ವಿ

ಮುಂಬೈ,ಜ,16-ಸಿದ್ದಕಿ ಹತ್ಯೆ ನಂತರ ಬಾಲಿವುಡ್‌ ನಟರ ಮೇಲೆ ದಾಳಿಮಾಡಲಾಗುತ್ತದೆ ಎನ್ನುವ ಮಧ್ಯೆಯೇ ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಇಂದು ಬೆಳಗಿನ ಜಾವ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.ಮನೆಗಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಯೊಬ್ಬ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರ ಗಾಯಗೊಂಡ ಅವರನ್ನು ಲೀಲಾವತಿ ಆಸ್ಪತ್ರೆ ಗೆ ದಾಖಲಿಸಿದ್ದು ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದು,ಚಿಕಿತ್ಸೆ ಯಶಸ್ವಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ ಮಧ್ಯರಾತ್ರಿ 2.30ರ ಸುಮಾರಿಗೆ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನೆಯಲ್ಲಿದ್ದವರು ಎಚ್ಚರಗೊಂಡ ನಂತರ ದರೋಡೆಕೋರ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಲ್ಲೆಗೊಳಗಾಗಿದ್ದ ಸೈಫ್ ಅಲಿ ಖಾನ್ ಅವರನ್ನು ಮುಂಜಾನೆ 3.30ಕ್ಕೆ ಆಸ್ಪತ್ರೆಗೆ ಕರೆತರಲಾಯಿತು. ಸೈಫ್ ಅವರಿಗೆ 2 ಕಡೆ ಚಾಕುವಿನಿಂದ ಆಳವಾಗಿ ಇರಿಯಲಾಗಿದೆ. ಬೆನ್ನುಮೂಳೆ ಸೇರಿದಂತೆ ಆರು ಭಾಗಗಳಲ್ಲಿ ಗಾಯಗಳಾಗಿವೆ. ಸದ್ಯ ತಜ್ಞ ವೈದ್ಯರು ಶಸ್ತ್ರಚಿಕಿತ್ಸೆ ನಡೆಸುತ್ತಿದ್ದು ಒಂದು ಚಿಕಿತ್ಸೆವಫಲಕಾರಿಯಾಗಿದ್ದು ಮತ್ತೊಂದು ಶಸ್ತ್ರಚಿಕಿತ್ಸೆ ಕೂಡ ನಡೆಸಲಾಗುತ್ತಿದೆ’ಎಂದು ಲೀಲಾವತಿ ಆಸ್ಪತ್ರೆಯ ಸಿಒಒ ಡಾ.ನೀರಜ್ ಉತ್ತಮನಿ ಹೇಳಿದ್ದಾರೆ.

ಸಿದ್ದಕಿ ಕೊಲೆ ನಂತರ ಬಾಲಿವುಡ್ ನಟರ ಮೇಲೆ ದಾಳಿ ಮಾಡಲಾಗುತ್ತದೆ ಎಂಬ ಗುಪ್ತಚರ ಇಲಾಖೆಯ ಮಾಹಿತಿ ಇತ್ತಾದರೂ ಭದ್ರತೆ ವೈಫಲ್ಯದಿಂದ ಈ ಘಟನೆ ಸಂಭವಿಸಿದೆ ಎನ್ನುವುದು ರಾಜಕೀಯ ಕೆರಚಾಟಕ್ಕೆ ಕಾರಣವಾಗಿದೆ.

Girl in a jacket
error: Content is protected !!