ಕುಂಭಮೇಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ದೆಹಲಿಯಲ್ಲಿ ಕಾಲ್ತುಳಿತಕ್ಕೆ ೧೮ ಮಂದಿ ಬಲಿ
by-ಕೆಂಧೂಳಿ
ನವದೆಹಲಿ,ಫೆ,೧೬-ಕುಂಭಮೇಳಕ್ಕೆ ತೆರಳುವವರ ಬಲಿಗಳು ಹೆಚ್ಚಾಗುತ್ತಿವೆ ದೆಹಲಿಯಲ್ಲಿ ವಿಶೇಷ ರೈಲು ತಡವಾದ ಕಾರನ ಶನಿವಾರ ರಾತ್ರ ಪ್ರಯಾಣಿಕ ದಟ್ಟಣೆಯಿಂದ ಕಾಲ್ತುಳಿತದಿಂದ ೧೮ ಮಂದಿ ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರಲ್ಲಿ ೧೦ ಮಂದಿ ಮಹಿಳೆಯರು ಮೂವರು ಮಕ್ಕಳು ಇತರೆ ಐದುಜನ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ನೂಕುನುಗ್ಗಲಿನಿಂದಾಗಿ ನಾಲ್ವರು ಉಸಿರಾಡಲು ಸಾಧ್ಯವಾಗದೆ ಪ್ರಜ್ಞೆ ತಪ್ಪಿಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೂ ಕನಿಷ್ಠ ೧೫ ಮಂದಿ ಮೃತಪಟ್ಟಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಅಗ್ನಿ ಶಾಮಕ ದಳ ಕೂಡಲೇ ಸ್ಥಳಕ್ಕಾಗಮಿಸಿದ್ದು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದೆ.
ದೆಹಲಿಯ ಎಲ್ಎನ್ಜೆಪಿ ಆಸ್ಪತ್ರೆಯ ಮುಖ್ಯ ಅಪಘಾತ ವೈದ್ಯಕೀಯ ಅಧಿಕಾರಿ ೧೫ ಮಂದಿ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ. ಮೃತಪಟ್ಟವರಲ್ಲಿ ೧೦ ಮಹಿಳೆಯರು ಮತ್ತು ಮೂವರು ಮಕ್ಕಳು ಮತ್ತು ಇಬ್ಬರು ಪುರುಷರು ಸೇರಿದ್ದಾರೆ ಎಂದು ಹೇಳಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸುವಂತೆ ರೈಲ್ವೆ ಇಲಾಖೆ ಆದೇಶ ನೀಡಿದೆ.
ಪ್ರಯಾಗ್ರಾಜ್ಗೆ ತೆರಳುವ ರೈಲುಗಳನ್ನು ಹತ್ತಲು ಪ್ರಯಾಣಿಕರು ಕಾಯುತ್ತಿದ್ದ ಸಂದರ್ಭದಲ್ಲಿ ಪ್ಲಾಟ್ಫಾರ್ಮ್ ಸಂಖ್ಯೆ ೧೪ ಮತ್ತು ೧೫ ರಲ್ಲಿ ರಾತ್ರಿ ೮ ಗಂಟೆ ಸುಮಾರಿಗೆ ಜನಸಂದಣಿ ತೀವ್ರವಾಗಿದ್ದು ನೂಕುನುಗ್ಗಲು ಉಂಟಾಗಿದೆ.
ರೈಲ್ವೆ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾದಂತೆ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ನಾಲ್ಕು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನಿಲ್ದಾಣಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಜನದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅಶ್ವಿನಿ ವೈಷ್ಣವ್ ಟ್ವೀಟ್ ಮಾಡಿದ್ದಾರೆ.
ಘಟನೆ ಸಂಭವಿಸಿದ ಬಳಿಕ ತುರ್ತು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಘಟನೆ ಬಗ್ಗೆ ರೈಲ್ವೆ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ರೈಲ್ವೆ ಪೊಲೀಸರು ಮತ್ತು ದೆಹಲಿ ಪೊಲೀಸರು ನವದೆಹಲಿ ರೈಲ್ವೆ ನಿಲ್ದಾಣಕ್ಕೆ ತಲುಪಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿದೆ.