ಗುಜರಾತ್‌ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಪ್ರಮಾಣವಚನ ಸ್ವೀಕಾರ

Share

ಅಹಮದಾಬಾದ್,ಸೆ,೧೩: ಗುಜರಾತ್‌ನ ೧೭ನೇ ಮುಖ್ಯಮಂತ್ರಿಯಾಗಿ ನಿನ್ನೆ ಆಯ್ಕೆಯಾದ ಭೂಪೇಂದ್ರ ಪಟೇಲ್ (೫೯) ಇಂದು ಪ್ರಮಾಣ ವಚನ ಸ್ವೀಕರಿಸಿದರು. ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಅಹಮದಾಬಾದ್‌ನ ರಾಜಭವನದಲ್ಲಿ ಆಯೋಜಿಸಲಾಗಿತ್ತು. ರಾಜ್ಯಪಾಲ ಆಚಾರ್ಯ ದೇವವೃತ ಪ್ರತಿಜ್ಞಾ ವಿಧಿ ಬೋಧಿಸಿದರು. ಗೃಹ ಸಚಿವ ಅಮಿತ್ ಶಾ ಸೇರಿ ಹಲವು ಕೇಂದ್ರ ಸಚಿವರು, ಉಪಮುಖ್ಯಮಂತ್ರಿ ನಿತಿನ್ ಪಟೇಲ್, ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟg, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಗೋವಾ ಸಿಎಂ ಪ್ರಮೋದ್ ಸಾವಂತ್ ಮತ್ತಿತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಘಾಟ್‌ಲೋಡ್ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾದ ಭೂಪೇಂದ್ರ ಪಟೇಲ್‌ರನ್ನು ಬಿಜೆಪಿ ಮುಖ್ಯಮಂತ್ರಿಯನ್ನಾಗಿ ನಿನ್ನೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಿದೆ. ಈ ಸಭೆಗೆ ಕೇಂದ್ರದಿಂದ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ನರೇಂದ್ರ ಸಿಂಗ್ ತೋಮರ್ ವೀಕ್ಷಕರಾಗಿ ಆಗಮಿಸಿದ್ದರು. ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಬೆಳಗ್ಗೆ ಉಪಮುಖ್ಯಮಂತ್ರಿ ನಿತಿನ್ ಪಟೇಲ್‌ರನ್ನು ಭೇಟಿಯಾಗಿದ್ದರು. ನಂತರ ಸ್ವಾಮಿನಾರಾಯಣ ಗುರುಕುಲಕ್ಕೆ ಭೇಟಿ ನೀಡಿ ಅಲ್ಲಿನ ಸಾಧು, ಸನ್ಯಾಸಿಗಳ ಆಶೀರ್ವಾದ ಪಡೆದಿದ್ದಾರೆ.
ವಿಜಯ ರೂಪಾಣಿ ಅವರು ಗುಜರಾತ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಭೂಪೇಂದ್ರ ಅವರನ್ನು ಸ್ಥಾನಕ್ಕೆ ಆಯ್ಕೆ ಮಾಡಿತು. ಗುಜರಾತ್ ವಿಧಾನಸಭೆಗೆ ೨೦೨೨ರ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಬೇಕಿದೆ.ಭೂಪೇಂದ್ರ ಪಟೇಲ್ ಅವರು ತಳಮಟ್ಟದಿಂದ ಹಂತ ಹಂತವಾಗಿ ಬೆಳೆದವರು. ನಗರಸಭೆಯಿಂದ ತಮ್ಮ ರಾಜಕೀಯ ಆರಂಭಿಸಿದವರು. ೨೦೧೭ರಲ್ಲಿ ಅವರು ಘಟ್ಲೋಡಿಯಾ ಕ್ಷೇತ್ರದಿಂದ ಮೊದಲ ಬಾರಿ ವಿಧಾನಸಭಾ ಚುನಾವಣೆ ಎದುರಿಸಿದರು. ಆದರೆ, ಆ ಚುನಾವಣೆಯಲ್ಲಿ ಗರಿಷ್ಠ ಅಂತರದಲ್ಲಿ ಗೆದ್ದರು. ಅವರ ಗೆಲುವಿನ ಅಂತರ ೧.೧೭ ಲಕ್ಷ ಮತಗಳು ಪ್ರಧಾನಿ ಮೋದಿ, ನಡ್ಡಾ, ರೂಪಾನಿಗೆ ಧನ್ಯವಾದ ಹೇಳಿದ ಗುಜರಾತ್ ನೂತನ ಸಿಎಂಹತ್ತಿರದವರು ಅವರನ್ನು ‘ದಾದಾ’ ಎಂದು ಕರೆಯುತ್ತಾರೆ. ಗುಜರಾತಿನ ಮಾಜಿ ಮುಖ್ಯಮಂತ್ರಿ ಮತ್ತು ಉತ್ತರ ಪ್ರದೇಶ ರಾಜ್ಯಪಾಲೆ ಆಗಿರುವ ಆನಂದಿಬೆನ್ ಪಟೇಲ್ ಅವರಿಗೆ ಭೂಪೇಂದ್ರ ಅವರು ನಿಕಟವರ್ತಿ. ಹಿಂದೆ ಆನಂದಿಬೆನ್ ಅವರು ಪ್ರತಿನಿಧಿಸಿದ್ದ ವಿಧಾನಸಭಾ ಕ್ಷೇತ್ರದಿಂದಲೇ ಭೂಪೇಂದ್ರ ಅವರೂ ಗೆದ್ದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿನಿಧಿಸುವ ಗಾಂಧಿನಗರ ಲೋಕಸಭಾ ಕ್ಷೇತ್ರದ ಭಾಗವಾಗಿದೆ ಈ ಕ್ಷೇತ್ರ.ಭೂಪೇಂದ್ರ ಅವರು ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ೨೦೧೫-೧೭ರ ಅವಧಿಯಲ್ಲಿ ಕೆಲಸ ಮಾಡಿದ್ದರು. ಅದಕ್ಕೂ ಮೊದಲು ಅಹಮದಾಬಾದ್ ನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. ೨೦೧೦ರಿಂದ ೨೦೧೫ರವರೆಗೆ ಈ ಹುದ್ದೆಯಲ್ಲಿ ಅವರು ಇದ್ದರು.ಭೂಪೇಂದ್ರ ಅವರು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಸದಾ ಹಸನ್ಮುಖಿ ಮತ್ತು ತಳಮಟ್ಟದ ಕಾರ್ಯಕರ್ತರ ಜತೆಗೆ ನೇರ ಸಂಪರ್ಕ ಹೊಂದಿದ್ದಾರೆ ಎಂದು ಅವರ ಆಪ್ತರು ಹೇಳುತ್ತಾರೆ. ಸ್ಥಳೀಯ ರಾಜಕಾರಣದಲ್ಲಿ ಹೆಚ್ಚು ಸಕ್ರಿಯವಾಗಿ ಇದ್ದದ್ದು ಇದಕ್ಕೆ ಕಾರಣ. ಅಹಮದಾಬಾದ್ ಜಿಲ್ಲೆಯಲ್ಲಿರುವ ಮೇಮ್‌ನಗರ ನಗರಸಭೆಯ ಸದಸ್ಯರಾಗಿದ್ದರು. ಎರಡು ಬಾರಿ ಅಧ್ಯಕ್ಷರೂ ಆಗಿದ್ದರು. ಪಟೇಲ್ ಸಮುದಾಯದ ಸಾಮಾಜಿಕ ಆರ್ಥಿಕ ಅಭಿವೃದ್ಧಿ ಉದ್ದೇಶಕ್ಕೆ ಸ್ಥಾಪಿತವಾದ ಸರ್ದಾರ್‌ಧಾಮ್ ವಿಶ್ವ ಪಾಟೀದಾರ್ ಕೇಂದ್ರದ ಟ್ರಸ್ಟಿಯಾಗಿಯೂ ಅವರು ಇದ್ದಾರೆ.

 

 

Girl in a jacket
error: Content is protected !!