ಭಾರತದಲ್ಲಿ ಹತೋಟಿಗೆ ಬಂದ ಕೊರೊನಾ ಪ್ರಕರಣಗಳು;ಒಂದೇ ದಿನ 1,34,154 ಮಂದಿಗೆ ಸೋಂಕು

Share

 

ನವದೆಹಲಿ, ಜೂ,03:ಕೋವಿಡ್-೧೯ ಸರ್ಕಾರ ತಗೆದು ಕೊಂಡ ನಿಯಂತ್ರಣ ಕ್ರಮದಿಂದ ಸದ್ಯ ಒಂದು ಹಂತದವರೆಗೂ ಹತೋಟಿಗೆ ಬಂದಂತೆ ಕಾಣುತ್ತಿದೆ.
ಪ್ರತಿನಿತ್ಯ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ 1,00,000ಕ್ಕಿಂತಲೂ ಹೆಚ್ಚಿದ್ದು, ಸಾವಿನ ಪ್ರಮಾಣದಲ್ಲೂ ಇಳಿಮುಖ ಕಂಡು ಬಂದಿದೆ.

ದೇಶದಲ್ಲಿ ಒಂದೇ ದಿನ 1,34,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,11,499 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2,887 ಮಂದಿ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಒಟ್ಟು 2,84,41,986 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,63,90,584 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,37,989 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 17,13,413 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಂದೇ ದಿನ 21 ಲಕ್ಷ ಜನರಿಗೆ ಕೊರೊನಾವೈರಸ್ ತಪಾಸಣೆ
ಭಾರತದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಅತಿಹೆಚ್ಚು ಜನರಿಗೆ ಕೊರೊನಾವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 21,59,873 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 35,37,82,648 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

Girl in a jacket
error: Content is protected !!