ಭಾರತದಲ್ಲಿ ಹೊಸ ಮಾದರಿಯ ವೈರಸ್ ಪತ್ತೆ

Share

ಪುಣೆ, ಜೂ,7: ನಿಧಾನಕ್ಕೆ ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗುತ್ತಿರುವ ಈ ವೇಳೆ ಹೊಸ ಮಾದರಿಯ ವೈರಸ್ ಪತ್ತೆಯಾಗಿದೆ.

ಇದನ್ನು B.1.1.28.2 ಕೊರೊನಾವೈರಸ್‌ ಎಂದು ಕರೆಯಲಾಗಿದ್ದು ಪುಣೆಯ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಪತ್ತೆ ಹಚ್ಚಿದೆ.

ಬ್ರೆಜಿಲ್ ಮತ್ತು ಯುಕೆಯಿಂದ ಆಗಮಿಸಿದ ಪ್ರಯಾಣಿಕರಲ್ಲಿ ಸಂಗ್ರಹಿಸಿದ ಗಂಟಲು ಮತ್ತು ಮೂಗಿನ ದ್ರವಗಳಲ್ಲಿ ಈ ಹೊಸ ರೂಪಾಂತರಿ ಕೊರೊನಾ ವೈರಸ್‌ ಪತ್ತೆಯಾಗಿದೆ. ಸಿರಿಯನ್ ಹ್ಯಾಮ್ಸ್ಟರ್ ಮಾದರಿಯಲ್ಲಿ ಪತ್ತೆಯಾದ ರೂಪಾಂತರಿ ವೈರಸ್‌ನ ತೀವ್ರತೆಯನ್ನು ಪರೀಕ್ಷಿಸಲಾಗುತ್ತಿದ್ದು D614G ರೂಪಾಂತರಿಯೊಂದಿಗೆ ಹೋಲಿಕೆ ಮಾಡಲಾಗಿದೆ.
ಹೊಸ ರೂಪಾಂತರಿ ದೇಹದ ತೂಕದ ಇಳಿಕೆಗೆ ಕಾರಣವಾಗಿದ್ದು ಶ್ವಾಸನಾಳದಲ್ಲಿ ಮತ್ತು ಶ್ವಾಸಕೋಶಕ್ಕೆ ಘಾಸಿಗೊಳಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ. D614G ರೂಪಾಂತರಿಗಿಂತ ಹೆಚ್ಚಿನ ಪರಿಣಾಮವನ್ನು ಉಂಟುಮಾಡುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ವರ್ಗಾವಣೆಯಾದರೂ ತಣ್ಣಗಾಗಿಲ್ಲ ರೋಹಿಣಿ ಸಿಂಧೂರಿ ಮೇಲಿನ ಕೋಪ ವರ್ಗಾವಣೆಯಾದರೂ ತಣ್ಣಗಾಗಿಲ್ಲ ರೋಹಿಣಿ ಸಿಂಧೂರಿ ಮೇಲಿನ ಕೋ
ಪರೀಕ್ಷೆಗಳ ಆಧಾರದಲ್ಲಿ ಪತ್ತೆಯಾಗಿರುವ ಹೊಸ ಮಾದರಿಯ ವೈರಸ್ ಭಾರತದಲ್ಲಿ ಮೊದಲು ಪತ್ತೆಯಾದ ಡೆಲ್ಟಾ ರೂಪಾಂತರಿಯಷ್ಟೇ ತೀವ್ರತೆಯನ್ನು ಹೊಂದಿದೆ ಎಂದು ತಜ್ಞರು ಹೇಳಿದ್ದಾರೆ. ಇಂಗ್ಲೆಂಡ್‌ನಲ್ಲಿ ಮೊದಲಿಗೆ ಪತ್ತೆಯಾದ ‘ಆಲ್ಫಾ’ ರೂಪಾಂತರಿಗಿಂತ ಹೆಚ್ಚಿನ ಅಪಾಯಕಾರಿಯಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

Girl in a jacket
error: Content is protected !!