ರಾಜಸ್ಥಾನದಲ್ಲಿ ಸಿಡಿಲು ಬಡೆದು 11 ಮಂದಿ ಸಾವು

Share

ಜೈಪುರ,ಜು:ನಿನ್ನೆ ರಾತ್ರಿ ಸಿಡಿಲು ಬಡೆದು 11ಮಂದಿ ಸಾವನ್ನಪ್ಪಿದ್ದು ಕೆಲವರು ಗಾಯಗೊಂಡ ಘಟನೆ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್‌ನಲ್ಲಿ ಜರುಗಿದೆ.

ಅಮೆರ್‌ ಪ್ಯಾಲೆಸ್‌ನ ವಾಚ್‌ ಟವರ್‌ ಮೇಲೆ ಜನರು ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಈ ದುರಂತ ಸಂಭವಿಸಿದೆ. ಕೆಲವರು ಸಿಡಿಲಿನ ಭಯಕ್ಕೆ ವಾಚ್‌ ಟವರ್‌ ಮೇಲಿಂದ ಧುಮುಕಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ.

ಸಿಡಿಲು ಬಡಿದಾಗ ವಾಚ್‌ ಟವರ್‌ ಮೇಲೆ 27 ಜನರು ಇದ್ದರು ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಬಗ್ಗೆ ಸಂತಾಪ ಸೂಚಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮೃತಪಟ್ಟವರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.

Girl in a jacket
error: Content is protected !!