ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಕಪಟಿ”

Share

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಕಪಟಿ”

by-ಕೆಂಧೂಳಿ

“ಹಗ್ಗದ ಕೊನೆ”, “ಆ ಕಾರಾಳ ರಾತ್ರಿ” ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ದಯಾಳ್ ಪದ್ಮನಾಭನ್ ಅವರು ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿರುವ, ರವಿಕಿರಣ್ – ಚೇತನ್ ಎಸ್ ಪಿ ನಿರ್ದೇಶಿಸಿರುವ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕಪಟಿ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಹೆಸರಾಂತ ನಿರ್ಮಾಪಕರಾದ ಕೆ.ಮಂಜು, ರಮೇಶ್ ಯಾದವ್ ಹಾಗೂ ಅವಿನಾಶ್ ಯು ಶೆಟ್ಟಿ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಚಿತ್ರಕ್ಕೆ ನೀವೆಲ್ಲಾ ನೀಡುತ್ತಿರುವ ಪ್ರೋತ್ಸಾಹಕ್ಕೆ ಧನ್ಯವಾದ ಎಂದು ಮಾತನಾಡಿದ ಚಿತ್ರದ ನಿರ್ಮಾಪಕ‌ ದಯಾಳ್ ಪದ್ಮನಾಭನ್, ಮೂಲತಃ ಸಾಫ್ಟ್‌ವೇರ್ ಉದ್ಯೋಗಿಗಳಾಗಿರುವ ಹಾಗು ಚಿತ್ರದ ನಿರ್ದೇಶಕರೂ ಆಗಿರುವ ರವಿಕಿರಣ್ ಹಾಗೂ ಚೇತನ್ ಎಸ್ ಪಿ ಮೊದಲು ಈ ಚಿತ್ರದ ನಿರ್ಮಾಣ‌ ಆರಂಭಿಸಿದ್ದರು. ನಂತರ ನನ್ನ ಬಳಿ ಬಂದು ಈ ಚಿತ್ರದ ಬಗ್ಗೆ ಹೇಳಿದರು. ನಾನು ಸಹ ಚಿತ್ರವನ್ನು ನೋಡಿದೆ. ನನಗೆ ಚಿತ್ರ ಇಷ್ಟವಾಯಿತು. ಆನಂತರ ನಾನು ಅವರ ಬಳಿ ಚಿತ್ರಕ್ಕೆ ಸಂಬಂಧಿಸಿದ ಹಾಗೆ ಕೆಲವು ಕಂಡೀಶನ್ ಗಳನ್ನು ಹೇಳಿದೆ. ನನ್ನ ಎಲ್ಲಾ ಕಂಡೀಶನ್ ಗಳಿಗೆ ಅವರು ಒಪ್ಪಿದರು. ಆನಂತರ ಚಿತ್ರದ ಪೂರ್ಣ ನಿರ್ಮಾಣದ ಜವಾಬ್ದಾರಿಯನ್ನು ನಾನು ತೆಗೆದುಕೊಂಡೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಡಾರ್ಕ್ ವೆಬ್ ಜಾನರ್ ನ ಚಿತ್ರವಿದು. ಇಂದು ಟ್ರೇಲರ್ ಬಿಡುಗಡೆಯಾಗಿದೆ‌‌. ಮಾರ್ಚ್ 7 ರಂದು “ಕಪಟಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದರು.

ಪ್ರಮುಖಪಾತ್ರಗಳಲ್ಲಿ ನಟಿಸಿರುವ ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್, ನಟ ಶಂಕರ್ ನಾರಾಯಣ್ ಹಾಗೂ ಛಾಯಾಗ್ರಾಹಕರಾದ ವಿಕ್ರಮ್ ಮತ್ತು ಸತೀಶ್ ರಾಜೇಂದ್ರನ್ “ಕಪಟಿ” ಚಿತ್ರದ ಕುರಿತು ಮಾತನಾಡಿದರು.

ಸತೀಶ್ ಹೆಚ್ ಎನ್ ಅವರು ವೇದಿಕೆಗೆ ಆಗಮಿಸಿ, ನಮ್ಮನ್ನು ಕೆಲವರು ಆಧುನಿಕ ತಂತ್ರಜ್ಞಾನದ ಮೂಲಕ ಹೇಗೆಲ್ಲಾ ಮೋಸ ಮಾಡುತ್ತಾರೆ ಎಂಬುದನ್ನು ಪರದೆಯ ಮೇಲೆ ತೋರಿಸುತ್ತಾ ವಿವರಿಸಿದರು.

Girl in a jacket
error: Content is protected !!