ಈ ಹಿಂದೆ ಅವರೇ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹೆಣ್ಣುಮಗಳು ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದ ಸಂದರ್ಭದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಕಾರದಿಂದ ಪರೀಕ್ಷೆ ಬರೆದು ನೀಟ್ ಪಾಸಾಗಿದ್ದು ಇಡೀ ದೇಶದ ಗಮನ ಸೆಳೆದಿತ್ತು.
ಪರೀಕ್ಷೆ ಬರೆಯಲು ಸುಮಾರು ೩೫೦ಕಿಮೀ ದೂರ ಪ್ರಯಾಣ ಮಾಡಿ ಬಂದು ಪರೀಕ್ಷೆ ಬರೆದಿದ್ದೆ ರೋಚಕತೆಯಿಂದ ಕೂಡಿದ್ದು, ಎಲ್ಲರ ಕುತೂಹಲ ಕೆರಳಿಸಿತು ಇದನ್ನೇ ಒನ್ಲೈನ್ ಸ್ಟೋರಿ ಆಗಿಸಿಕೊಂಡು ಸಾಮಾಜಿಕ ಕಳಕಳಿಯುಳ್ಳ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿಯವರು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.
ಇದೀಗ ಮಾಜಿ ಸಿಎಂ ಆಗಮನದಿಂದ ಚಿತ್ರತಂಡಕ್ಕೆ ದೊಡ್ಡ ಗೆಲುವಾಗಿದ್ದು ಖುದ್ದು ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರ ಪಾತ್ರಕ್ಕೆ ಬಣ್ಣಹಚ್ಚಿದ್ದು ವಿಶೇಷವಾಗಿದೆ.
‘ತನುಜಾ’ ಚಿತ್ರ ನೈಜ ಘಟನೆಯಾಧಾರಿತ ವಾಗಿದ್ದು ಶಿವಮೊಗ್ಗದ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತ ಪಾವೂರು ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದು ತಾರಾಗಣದಲ್ಲಿ ಬಿ.ಎಸ್ ಯಡಿಯೂರಪ್ಪ, ವಿಶ್ವೇಶ್ವರಯ್ಯ ಭಟ್, ಡಾ.ಕೆ ಸುಧಾಕರ್, ರಾಜೇಶ್ ನಟರಂಗ, ಕೈಲಾಶ್, ಸಂಧ್ಯಾ ಅರಕೆರೆ, ಬೇಬಿ ಶ್ರೀ, ಅಭಿನಯಿಸುತ್ತಿದ್ದು, ಪ್ರದ್ಯೋತನ ಸಂಗೀತ ನಿರ್ದೇಶನ ಹಾಗೂ ರವೀಂದ್ರನಾಥ್ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನವಿದ್ದು ಆರ್ ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ ಪ್ರಹ್ಲಾದ್ ಸಂಭಾಷಣೆ ಬರೆದಿದ್ದು ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.