ನಟ್ ಯಶ್‌ನಿಂದ ೩೦೦೦ ಕಾರ್ಮಿಕರಿಗೆ ತಲಾ ೫೦೦೦ ರೂ ಪರಿಹಾರ

Share

ಬೆಂಗಳೂರು,ಜೂ,೦೧; ಕೊರೊನಾ ಅಟ್ಟಹಾಸದಿಂದ ರಾಜ್ಯ ಸರ್ಕಾರ ಲಾಕ್‌ಡೌನ್‌ಮಾಡಿದ ಪರಿಣಾಮ ಚಿತ್ರದ್ಯೋಮ ಸಂಪೂರ್ಣ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಾವಿರಾರು ಕಲಾವಿದರು ತಂತ್ರಜ್ಞರು,ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ.
ಸಂಕಷ್ಟದಲ್ಲಿರುವ ಮೂರು ಸಾವಿರ ಕಾರ್ಮಿಕರಿಗೆ ನಟ ಯಶ್ ತಲಾ ೫೦೦೦ ರೂಗಳನ್ನು ಘೋಷಿಸಿದ್ದಾರೆ.
ಹೌದು. ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಚಿತ್ರರಂಗದ ೨೧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು ೩,೦೦೦ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ ೫ ಸಾವಿರವನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ.ಗೋವಿಂದ್ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ’ ಎಂದು ಯಶ್ ತಿಳಿಸಿದ್ದಾರೆ.ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲ ಕಷ್ಟಗಳಿಗೂ ಪರಿಹಾರ ಎಂಬುವುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ, ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎನ್ನುವುದು ನನ್ನ ಆಶಯ’ ಎಂದು ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಯಶ್ ಉಲ್ಲೇಖಿಸಿದ್ದಾರೆ. ಈಗಾಗಲೇ ನಟರಾದ ಉಪೇಂದ್ರ, ಸುದೀಪ್, ಸಾಧುಕೋಕಿಲ ಮುಂತಾದವರು ಸಂಕಷ್ಟದಲ್ಲಿರುವ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರಿಗೆ ಆರ್ಥಿಕ ನೆರವು ಹಾಗೂ ದಿನಸಿ ಕಿಟ್‌ಗಳನ್ನು ವಿತರಿಸಿದ್ದಾರೆ.

Girl in a jacket
error: Content is protected !!