ಹಿರಿಯ ನಟಿ ಬಿ ಜಯಾ ಇನ್ನಿಲ್ಲ

Share

ಬೆಂಗಳೂರು,ಜೂ,03: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ಕಲಾವಿದೆ, ಪೋಷಕ ನಟಿ ಬಿ.ಜಯಾ ಇಂದು ತಮ್ಮ ಕೊನೆಯುಸಿರೆಳೆದಿದ್ದಾರೆ.

ಚಿತ್ರರಂಗದ ಅನೇಕ ಹಿರಿಯ ನಟರೊಂದಿಗೆ ಕಾಣಿಸಿಕೊಂಡಿದ್ದ ಅವರು, ಮುನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಸ್ಯ ಕಲಾವಿದೆಯಾಗಿದ್ದ ಅವರು, ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ ಗುರುವಾರದಂದು ಕೊನೆಯುಸಿರು ಎಳೆದಿದ್ದಾರೆ. ಅನೇಕ ಹಿರಿಯ ನಟರೊಂದಿಗೆ ಕಾಣಿಸಿಕೊಂಡಿದ್ದ ನಟಿಯ ಸಾವಿಗೆ ಚಿತ್ರರಂಗವೇ ಕಣ್ಣೀರು ಸುರಿಸತೊಡಗಿದೆ.

ಎತ್ತರದಲ್ಲಿ ಕೊಂಚ ಕುಳ್ಳಗಿದ್ದ ಜಯಾ ಅವರು ಕುಳ್ಳಿ ಜಯಾ ಎಂದೇ ಜನಪ್ರಿಯರಾಗಿದ್ದರು. ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ಜನರ ಮನಸ್ಸನ್ನು ಗೆದ್ದಿದ್ದರು. ಹಾಸ್ಯಮಯ ಪಾತ್ರಗಳಲ್ಲೂ ಕಾಣಿಸಿಕೊಂಡು ಅಭಿಮಾನಿಗಳ ಮೊಗದಲ್ಲಿ ನಗು ಮೂಡಿಸಿದ್ದರು. ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದರು. 1944ರಲ್ಲಿ ಜನಿಸಿದ್ದ ಜಯಾ 1958ರಲ್ಲಿ ಭಕ್ತ ಪ್ರಹ್ಲಾದ ಸಿನಿಮಾ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದರು.

Girl in a jacket
error: Content is protected !!