ಉತ್ತರ ಕಾಶಿಯಲ್ಲಿ ಹೆಲಿಕಾಪ್ಟರ್ ಪತನ ಐವರು ಯಾತ್ರಿಕರು ಸಾವು

Share

ಉತ್ತರ ಕಾಶಿ,ಮೇ,08- ಯಾತ್ರಿಕರನ್ನು ಕರೆದೊಯ್ಯುತ್ತುದ್ದ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಉತ್ತರಖಂಡದ ಉತ್ತರಕಾಶಿಯಲ್ಲಿ ನಡೆದಿದೆ.
ಈ ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿದ್ದಾರೆ.
ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ತೀರ್ಥಯಾತ್ರಿಕರನ್ನ ಕರೆದೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಯಮುನೋತ್ರಿಯಿಂದ ಗಂಗೋತ್ರಿಗೆ ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.

ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Girl in a jacket
error: Content is protected !!