ರೌಡಿಶೀಟರ್ ಹತ್ಯೆ ಪ್ರಕರಣ; ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಪ್ ಐ ಆರ್ ದಾಖಲು

Share

ಬೆಂಗಳೂರು, ಜು,16- ರೌಡಿಶೀಟರ್ ಬಿಕ್ಲು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಭೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ದು ಎಫ್ ಐಆರ್ ದಾಖಲಾಗಿದೆ.

ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಏನೀಘಟನೇ?
ನಿನ್ನೆ ಬೆಂಗಳೂರು ನಗರದಲ್ಲಿ ರೌಡಿ ಶೀಟರ್ ಶಿವಕುಮಾರ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಹಲಸೂರು ಕೆರೆ ಬಳಿಯ ಮನೆಯ ಮುಂದೆ ರೌಡಿ ಶೀಟರ್ ಶಿವಕುಮಾರ್ ಆಲಿಯಾಸ್ ಬಿಕ್ಲು ಶಿವ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಗೈದಿದ್ದಾರೆ.

ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಕೊಲೆ ಗೈದಿದ್ದಾರೆ. ಬಿಕ್ಲು ಶಿವನನ್ನು ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿಸಿಪಿ ಡಿ.ದೇವರಾಜ, ಜಂಟಿ ಪೊಲೀಸ್ ಆಯುಕ್ತ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Girl in a jacket
error: Content is protected !!